ನವದೆಹಲಿ: ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದಾರೆ.
ಇಂದು ಸಂಸತ್ ಭವನದಲ್ಲಿ ನಡೆದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಕಳೆದ 10 ವರ್ಷಗಳಿಂದ ಜೆಡಿಯು ಅಧ್ಯಕ್ಷರಾಗಿದ್ದ ಶರದ್ ಯಾದವ್ ಅವರು ಇತ್ತೀಗಷ್ಟೇ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ ಜೆಡಿಯು ಪಕ್ಷವನ್ನು ಇತರ ರಾಜ್ಯಗಳಿಗೆ ವಿಸ್ತರಿಸಬೇಕು ಎಂದು ಜೆಡಿಯು ರಣತಂತ್ರ ರೂಪಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.