ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಸೀಳಿದ ಪತಿ
ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಸೀಳಿದ ಗಂಡ ಆಕೆಯನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ...
ಹೈದರಾಬಾದ್: ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಸೀಳಿದ ಗಂಡ ಆಕೆಯನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಹೈದರಾಬಾದ್ ನ ರಾಜೇಂದ್ರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ, ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಲಾಗಿದ್ದ ದೂರಿನ ಅನ್ವಯ ಪತಿ ಹಾಗೂ ಪತ್ನಿ ಇಬ್ಬರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಪತ್ನಿ ಸೌಜನ್ಯಳ ಕುತ್ತಿಗೆ ಸೀಳಿದ ನಾಗೇಂದ್ರ ಬಾಬು ಅಲ್ಲಿಂದ ಪರಾರಿಯಾಗಿದ್ದಾನೆ.
ಸೌಜನ್ಯ ತನ್ನ ಪೋಷಕರ ಜೊತೆ ಮಾತನಾಡುತ್ತಾ ಕೋರ್ಟ್ ಆವರಣದಲ್ಲಿ ನಿಂತಿದ್ದರು. ಈ ವೇಳೆ ಚೂಪಾದ ಚಾಕುವಿನಿಂದ ಕತ್ತು ಸೀಳಿದ ನಾಗೇಂದ್ರ ಬಾಬು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಪೊಲೀಸರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.