ಚಂಡೀಗಢ: ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಕಳ್ಳಸಾಗಾಣೆ ಮಾಡುತ್ತಿದ್ದ ಇಬ್ಬರು ಸ್ಮಗ್ಲರ್ಸ್'ಗಳನ್ನು ಬಿಎಸ್ ಎಫ್ ಯೋಧರು ಗುಂಡಿಟ್ಟು ಹತ್ಯೆ ಮಾಡಿದ್ದು, ಸುಮಾರು ರು.45 ಕೋಟಿ ಮೌಲ್ಯದ ಹೆರಾಯಿನ್'ನನ್ನು ವಶಪಡಿಸಿಕೊಂಡಿರುವುದಾಗಿ ಸೋಮವಾರ ತಿಳಿದುಬಂದಿದೆ.
ಅಮೃತ್ ಸರ್ ಸೆಕ್ಟರ್ ನ ಭೇರೊವಾಲ್ ಭಾರತ-ಪಾಕಿಸ್ತಾನ ಗಡಿಯಲ್ಲಿ ಬಿಎಸ್ಎಫ್ ಯೋಧರು ಗಸ್ತು ತಿರುಗುತ್ತಿದ್ದರು. ಈ ವೇಳೆ ಇಬ್ಬರು ವ್ಯಕ್ತಿಗಳ ಅಕ್ರಮ ಚಲನವಲನಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಯೋಧರು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದರೂ ಕೂಡ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ್ದಾರೆ. ಹೀಗಾಗಿ ಯೋಧರು ಇಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.
ಇಬ್ಬರನ್ನು ಸ್ಮಗ್ಲರ್ಸ್ ಗಳನ್ನು ಹತ್ಯೆ ಮಾಡಲಾಗಿದ್ದು, ರು.45 ಕೋಟಿ ಮೌಲ್ಯದ 9 ಕೆ.ಜಿ ಹೆರಾಯಿನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.