ದೇಶ

ಅಸ್ಸಾಂ ಮತಗಟ್ಟೆಯಲ್ಲಿ ಘರ್ಷಣೆ: 80 ವರ್ಷದ ವೃದ್ಧ ಸಾವು

Srinivas Rao BV

ಅಸ್ಸಾಂ: ಚುನಾವಣಾ ಕಣವಾಗಿರುವ ಅಸ್ಸಾಂ ನಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಹಾಗೂ ಮತದಾರರ ನಡುವೆ ಉಂಟಾದ ಘರ್ಷಣೆಯಲ್ಲಿ 80 ವರ್ಷದ ವೃದ್ಧ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿಗಳು ಸೇರಿ ಒಟ್ಟು ಮೂವರಿಗೆ ಗಾಯಗಳುಂಟಾಗಿವೆ. ಸಫರ್ಕಮಾರ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲಲು ಮತದಾರರಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಿಆರ್ ಪಿಎಫ್ ಸಿಬ್ಬಂದಿ ಹಾಗೂ ಮತದಾರರ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿ ಘರ್ಷಣೆ ಉಂಟಾಗಿದೆ. ಘರ್ಷಣೆಯಲ್ಲಿ ಅಬ್ದುಲ್ ರಶೀದ್(80) ಹಾಗೂ ಮೊತ್ಲೇಬ್ ಅಲಿ, ಇಬ್ಬರು ಸಿಆರ್  ಪಿಎಫ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಈ ಪೈಕಿ 80 ರ ವೃದ್ಧ ಅಬ್ದುಲ್ ರಶೀದ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಉಳಿದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಥಮಿಕ ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. 

SCROLL FOR NEXT