ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಕಡೆ ಬುಧವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.8ರಷ್ಟು ದಾಖಲಾಗಿದೆ.
ದೆಹಲಿ, ಕೋಲ್ಕತಾ, ಗುವಾಹಟಿ, ನೋಯ್ಡಾ, ಡೆಹ್ರಾಡೂನ್, ಹರುಣಾಚಲ ಪ್ರದೇಶ ಹಾಗೂ ಗುರುಗ್ರಾಮ್ ಸೇರಿದಂತೆ ಹಲವು ಕಡೆ ಭೂಮಿ ಕಂಪಿಸಿದ್ದು, ಜನ ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಮೈನ್ಮಾರ್ ದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.
ಇಂದು ಸಂಜೆ ಈ ಭೂಕಂಪನ ಸಂಭವಿಸಿದ್ದು, ಪ್ರಾಣ ಹಾನಿ ಹಾಗೂ ಆಸ್ತಿ ಹಾನಿ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭವಾಗಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಹಾಗೂ ಕೋಲ್ಕತಾದಲ್ಲಿ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.