ಇಸಿಸ್ ಉಗ್ರ ಸಂಘಟನೆ (ಸಂಗ್ರಹ ಚಿತ್ರ) 
ದೇಶ

ಕೆನಡಾ ಮೂಲದ ಸಿಖ್ ಮಹಿಳೆಯಿಂದ ದೆಹಲಿ ಮೇಲೆ ಉಗ್ರ ದಾಳಿ!

ಇಸಿಸ್ ಉಗ್ರ ಸಂಘಟನೆಗೆ ಸೇರಿದ ಕೆನಡಾ ಮೂಲದ ಸಿಖ್ ಮಹಿಳೆ ದೆಹಲಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆಯ ಮೂಲಗಳು ಎಚ್ಚರಿಕೆ ನೀಡಿದೆ...

ನವದೆಹಲಿ: ಇಸಿಸ್ ಉಗ್ರಸಂಘಟನೆಗೆ ಸೇರಿದ ಕೆನಡಾ ಮೂಲದ ಸಿಖ್ ಮಹಿಳೆ ದೆಹಲಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆಯ ಮೂಲಗಳು ಎಚ್ಚರಿಕೆ ನೀಡಿದೆ.

ಕೆನಡಾದಿಂದ ಭಾರತಕ್ಕೆ ಪ್ರಯಾಣ ಬೆಳೆಸಿರುವ ಸುಮಾರು 35 ವರ್ಷದ ಮಹಿಳೆಯನ್ನು ಶಂಕಿತ ಇಸಿಸ್ ಏಜೆಂಟ್ ಎಂದು ಗುರುತಿಸಲಾಗಿದ್ದು, ಆಕೆಯ ಹೆಸರು, ಪಾಸ್‌ಪೋರ್ಟ್ ಮತ್ತಿತರ ವಿವರಗಳು ಗುಪ್ತಚರ ಇಲಾಖೆಗೆ ಲಭ್ಯವಾಗಿದೆ. ಯಾರಿಗೂ ಅನುಮಾನ ಬಾರದಿರಲಿ ಎಂಬ ಕಾರಣಕ್ಕಾಗಿ ಇಸಿಸ್ ತನ್ನ ದುಷ್ಕೃತ್ಯಕ್ಕೆ ಮಹಿಳೆಯನ್ನು ಆತ್ಮಹತ್ಯಾ ಬಾಂಬರ್ ಆಗಿ ಬಳಸಿಕೊಳ್ಳುತ್ತಿದ್ದು, ಈಗಾಗಲೇ ಆಕೆ ಭಾರತದತ್ತ ಪ್ರಯಾಣ ಬೆಳೆಸಿದ್ದಾಳೆ ಎಂದು ಹೇಳಲಾಗುತ್ತಿದೆ.

ಇನ್ನು ಶಂಕಿತ ಉಗ್ರ ದಾಳಿ ಕುರಿತಂತೆ ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ರಾಜಧಾನಿ ದೆಹಲಿ ಸೇರಿದಂತೆ ದೇಶದ ಎಲ್ಲ ವಿಮಾನ ನಿಲ್ದಾಣಗಳಿಗೆ, ಭದ್ರತಾ ಏಜೆನ್ಸಿಗಳಿಗೆ ಹಾಗೂ ತನಿಖಾ ಸಂಸ್ಥೆಗಳಿಗೆ ಮಾಹಿತಿ ನೀಡಿದ್ದು, ಕಟ್ಟೆಚ್ಚರದಿಂದ ಇರುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಶಂಕಿತ ಮಹಿಳೆಯ ಮೇಲೆ ಕಣ್ಣಿಟ್ಟಿರುವ ಗುಪ್ತಚರ ಇಲಾಖೆಯ ಅಧಿಕಾರಿಗಳು ಆಕೆಯ ಪಾಸ್‌ಪೋರ್ಟ್ ಅವಧಿ 2016ರ ಡಿಸೆಂಬರ್‌ಗೆ ಕೊನೆಗೊಳ್ಳಲಿದೆ ಎಂಬ ಮಾಹಿತಿ ಕಲೆಹಾಕಿದ್ದಾರೆ. ಆದರೆ ಭದ್ರತಾ ಕಾರಣಗಳಿಂದಾಗಿ ಅದರ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ಐಸಿಸ್ ಜತೆ ಸಂಪರ್ಕ ಇರುವ ಶಂಕೆಯಲ್ಲಿ ಈವರೆಗೆ ದೇಶದಲ್ಲಿ ಸುಮಾರು 40 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇನ್ನು ಈವರೆಗೂ 24 ಭಾರತೀಯರು ಐಸಿಸ್ ಸೇರಿರುವ ಅನುಮಾನವಿದ್ದು, ಈ ಪೈಕಿ 6 ಮಂದಿ ವಿಧ್ವಂಸಕ ಕೃತ್ಯಗಳಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಗುಪ್ತಚರ ಇಲಾಖೆಯ ವರದಿಯಲ್ಲಿ ಪಾಶ್ಚಿಮಾತ್ಯ ರಾಷ್ಟ್ರಗಳ ಯುವಕರನ್ನು ಸೆಳೆಯುತ್ತಿರುವ ಸುನ್ನಿ ಜಿಹಾದಿ ಉಗ್ರ ಸಂಘಟನೆ ಪರ ವಿದೇಶಗಳಲ್ಲಿ ವಾಸಿಸುತ್ತಿರುವ ಭಾರತೀಯರ ಒಲವು ಹೆಚ್ಚುತ್ತಿದೆ ಎಂದು ಕಳವಳ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

SCROLL FOR NEXT