ಸಾಂದರ್ಭಿಕ ಚಿತ್ರ 
ದೇಶ

ಲೈಂಗಿಕ ಕಿರುಕುಳಕ್ಕೊಳಗಾಗಿ ಗಾಯಗೊಂಡಿದ್ದ ಆರ್'ಜೆಡಿ ಶಾಸಕನ ಸಹೋದರಿ ಸಾವು

ಭೋಜ್ಪುರಿ ಜಿಲ್ಲೆಯ ಆರ್'ಜೆಡಿ ಶಾಸಕ ಸರೋಜ್ ಯಾದವ್ ಅವರ ಸಹೋದರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆಯೊಂದು ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ...

ಪಾಟ್ನ: ಭೋಜ್ಪುರಿ ಜಿಲ್ಲೆಯ ಆರ್'ಜೆಡಿ ಶಾಸಕ ಸರೋಜ್ ಯಾದವ್ ಅವರ ಸಹೋದರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆಯೊಂದು ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಶೈಲಿ ದೇವಿ (40) ಲೈಂಗಿಕ ಕಿರುಕುಳಕ್ಕೊಳಗಾದ ಆರ್'ಜೆಡಿ ಶಾಸಕ ಸರೋಜ್ ಯಾದವ್ ಅವರ ಸಹೋದರಿಯಾಗಿದ್ದು, ಕೇಶವ್ಪುರಕ್ಕೆ ಹೋಗುವ ಸಲುವಾಗಿ ಸೋಮವಾರ ರಾತ್ರಿ ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ರಸ್ತೆ ಮಧ್ಯೆ ಆಟೋವನ್ನು ಅಡ್ಡಗಟ್ಟಿದ್ದ ಯುವಕರ ಗುಂಪೊಂದು ಶೈಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ನಂತರ ಆಟೋದಿಂದ ಕೆಳಗಿಳಿಸಲು ಯತ್ನಿಸಿದ್ದಾರೆ.

ಈ ವೇಳೆ ಶೈಲಿಯವರು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಪಿನಲ್ಲಿದ್ದ ಯುವಕನೊಬ್ಬ ತನ್ನ ಕೈಯಲ್ಲಿದ್ದ ರಾಡ್ ನಿಂದ ಶಾಸಕನ ಸಹೋದರಿಯ ತಲೆಗೆ ಹೊಡೆದಿದ್ದಾನೆ. ಈ ವೇಳೆ ಶೈಲಿಯವರ ತಲೆಗೆ ತೀವ್ರವಾಗಿ ಪೆಟ್ಟಾಗಿದೆ. ನಂತರ ಕೂಗಾಟದ ಶಬ್ಧ ಕೇಳುತ್ತಿದ್ದಂತೆ ಸ್ಥಳೀಯರು ಶೈಲಿಯವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶೈಲಿಯವರು ಇಂದು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಪ್ರಸ್ತುತ ಚಾಂಡಿ ಪೊಲೀಸ್ ಠಾಣೆಯಲ್ಲಿ ಐವರು ವ್ಯಕ್ತಿಗಳ ವಿರುದ್ಧ ಎಫ್ಆರ್ ಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಹೋದರಿಯ ಸಾವು ಕುರಿತಂತೆ ಮಾತನಾಡಿರುವ ಶಾಸಕ ಪೊಲೀಸರ ವಿರುದ್ದ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಶಾಸಕನ ಸಹೋದರಿಗೆ ಸರಿಯಾದ ಸುರಕ್ಷತೆ ಇಲ್ಲ ಎಂದಾದ ಮೇಲೆ ಇನ್ನು ಸಾಮಾನ್ಯ ಜನರಿಗೆ ಸುರಕ್ಷತೆ ಇಂದ ಇದ್ದೇವೆಂದು ಹೇಗೆ ಅಂದುಕೊಳ್ಳುತ್ತಾರೆ ಎಂದು ಕೇಳಿದ್ದಾರೆ.

ಘಟನೆಯನ್ನು ಖಂಡಿಸಿರುವ ಶಾಸಕನ ಬೆಂಬಲಿಗರು ಇದೀಗ ಬರ್ಹರದ ಪಾಟ್ನಾ-ಆರಾ ರಸ್ತೆಯನ್ನು ತಡೆಹಿಡಿದು ಸುಮಾರು 4 ಗಂಟೆಗಳ ಕಾಲ ಪ್ರತಿಭಟನೆಯನ್ನು ನಡೆಸಿದ್ದಾರೆ. ಪ್ರತಿಭಟನೆಯಿಂದಾಗಿ ಕೆಲವು ಗಂಟೆಗಳ ರಸ್ತೆ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!