ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರದಲ್ಲಿ ಮೊಬೈಲ್ ಅಂತರ್ಜಾಲ ಸೇವೆ ಸ್ಥಗಿತ

ನಾಗರಿಕರ ಮೇಲೆ ಯೋಧರು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವದಂತಿಗಳು ಹರಡುತ್ತಿದ್ದು, ಸಮಾಜದ...

ಜಮ್ಮು ಕಾಶ್ಮೀರ: ನಾಗರಿಕರ ಮೇಲೆ ಯೋಧರು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವದಂತಿಗಳು ಹರಡುತ್ತಿದ್ದು, ಸಮಾಜದ ವಿರೋಧಿ ಅಂಶಗಳು ಶಾಂತಿಯನ್ನು ಕದಡಬಹುದು ಎಂಬ ಹಿನ್ನಲೆಯಲ್ಲಿ ಅಲ್ಲಿನ ಪೊಲೀಸರು ಮೊಬೈಲ್ ಅಂತರ್ಜಾಲ ಸೇವೆಯನ್ನು ಗುರುವಾರ ಸ್ಥಗಿತಗೊಳಿಸಿದ್ದಾರೆ. 
ಅಂತರ್ಜಾಲ ಸೇವೆ ಪೂರೈಕೆದಾರರಿಗೆ ಈ ಸಂಬಂಧ ಸೂಚನೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 
ಮಂಗಳವಾರ ಯೋಧನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಯೋಧರ ವಿರುದ್ಧ ಸ್ಥಳಿಯರು ಪ್ರತಿಭಟನೆ ನಡೆಸಿದರು. ಈ ವೇಳೆ ಯೋಧರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಗುಂಪನ್ನು ಚದುರಿಸಲು ಯೋಧರು ಗುಂಡು ಹಾರಿಸಿ, ಅಶ್ರುವಾಯು ಸಿಡಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಯುವಕರು ಮೃತಪಟ್ಟಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಿದಾಡುತ್ತಿದ್ದು, ಇದರಿಂದ ಸಮಾಜದ ಶಾಂತಿ ಕದಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮೊಬೈಲ್ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. 
ಇಂದು ಬೆಳಗ್ಗಿನಿಂದಲೇ, ಕುಪ್ವಾರ, ಬರಮುಲ್ಲಾ, ಬಂಡಿಪುರ ಮತ್ತು ಗಂದೇರ್ ಬಲ್ ಜಿಲ್ಲೆಯಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಂಡಿದೆ. ಇನ್ನು ಶ್ರೀನಗರ ಮತ್ತು ದಕ್ಷಿಣ ಕಾಶ್ಮೀರ ನಿವಾಸಿಗಳು ಇಂಟರ್ ನೆಟ್ ಸೌಲಭ್ಯ ಸಿಗುತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT