ಮುಂಬೈಯಲ್ಲಿ ಗುರುವಾರ ನಡೆದ ಕಡಲ ಭಾರತ ಶೃಂಗಸಭೆ-2016 ಕಾರ್ಯಕ್ರಮದಲ್ಲಿ ಡಾ. ಅಂಬೇಡ್ಕರ್ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಮಾಲಾರ್ಪಣೆ 
ದೇಶ

ಅಂಬೇಡ್ಕರ್ 125ನೇ ಜಯಂತಿ: ಪ್ರಧಾನಿ ಮೋದಿ ಗೌರವ ನಮನ

ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 125ನೇ ಜಯಂತಿ ಅಂಗವಾಗಿ ಅವರ ಹುಟ್ಟೂರಾದ ಮ್ಹೋವ್ ಕಂಟೋನ್ ಮೆಂಟ್...

ಮ್ಹೋವ್ (ಮಧ್ಯಪ್ರದೇಶ): ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 125ನೇ ಜಯಂತಿ ಅಂಗವಾಗಿ ಅವರ ಹುಟ್ಟೂರಾದ ಮ್ಹೋವ್ ಕಂಟೋನ್ ಮೆಂಟ್ ಪಟ್ಟಣದ ಕಾಲಿಪಲ್ತನ್ ಪ್ರದೇಶದಲ್ಲಿರುವ ಅವರ ಪ್ರತಿಮೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಗೌರವ ನಮನ ಸಲ್ಲಿಸಿದರು.

ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮ್ಹೋವ್ ಕಂಟೋನ್ ಮೆಂಟ್ ಪಟ್ಟಣದಲ್ಲಿ 1891 ಏಪ್ರಿಲ್ 14ರಂದು ಜನಿಸಿದ್ದರು. ಅವರ ನೆನಪಿಗಾಗಿ ರಾಜ್ಯ ಸರ್ಕಾರ ಅವರ ಹುಟ್ಟೂರಲ್ಲಿ ಭವ್ಯ ಸ್ಮಾರಕದ ನಿರ್ಮಾಣ ಮಾಡಿತ್ತು. ಅಂಬೇಡ್ಕರ್ ಅವರ ಹುಟ್ಟೂರಿಗೆ ಭೇಟಿ ನೀಡಿದ ಮೊದಲ ಪ್ರಧಾನ ಮಂತ್ರಿ ಮೋದಿ ಎಂದು ಅಂಬೇಡ್ಕರ್ ಸಾಮಾಜಿಕ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿ ಆರ್.ಎಸ್. ಕುರೀಲ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಪ್ರಧಾನಿಯವರ ಜೊತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಇತರ ಗಣ್ಯರು ಸೇರಿದ್ದರು. ಅಂಬೇಡ್ಕರ್ ಅವರ ಭವ್ಯ ಸ್ಮಾರಕಕ್ಕೆ ಹೂ ಹಾರ ಸಮರ್ಪಿಸಿದ ಪ್ರಧಾನಿ ಅಲ್ಲಿ 15 ನಿಮಿಷಕ್ಕೂ ಹೆಚ್ಚು ಕಾಲ ಕಳೆದರು. ನಂತರ ಅವರು ಸಾರ್ವಜನಿಕ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದರು ಹಾಗೂ 11 ದಿನಗಳ ಗ್ರಾಮ ಉದಯ್ ಸೆ ಭಾರತ್ ಉದಯ್ ಅಭಿಯಾನ(ಗ್ರಾಮ ಸ್ವ ಆಡಳಿತ ಅಭಿಯಾನ)ಕ್ಕೆ ಚಾಲನೆ ನೀಡಿದರು.

ಇದಕ್ಕೂ ಮುನ್ನ ಇಂದೋರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಯವರನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ರಾಜ್ಯ ಆರೋಗ್ಯ ಸಚಿವ ನರೋತ್ತಮ್ ಮಿಶ್ರಾ ಸ್ವಾಗತಿಸಿದರು. ಮೋದಿಯವರು ಇಂದೋರ್ ವಿಮಾನ ನಿಲ್ದಾಣದಿಂದ ಮ್ಹೊವ್ ಗೆ ಹೆಲಿಕಾಪ್ಟರ್ ನಲ್ಲಿ ತೆರಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT