ಬೌದ್ಧ ಧರ್ಮವನ್ನು ಸ್ವೀಕರಿಸಲಿರುವ ರೋಹಿತ್ ವೇಮುಲಾ ತಾಯಿ ಹಾಗೂ ಸಹೋದರ 
ದೇಶ

ಬೌದ್ಧ ಧರ್ಮವನ್ನು ಸ್ವೀಕರಿಸಲಿರುವ ರೋಹಿತ್ ವೇಮುಲಾ ತಾಯಿ, ಸಹೋದರ

ಆತ್ಮಹತ್ಯೆಗೆ ಶರಣಾಗಿದ್ದ ಹೈದರಾಬಾದ್ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಕುಟುಂಬ ಸದಸ್ಯರು ಏ.14 ರಂದು ಬೌದ್ಧ ಧರ್ಮವನ್ನು ಸ್ವೀಕರಿಸಲಿದ್ದಾರೆ.

ಮುಂಬೈ: ಆತ್ಮಹತ್ಯೆಗೆ ಶರಣಾಗಿದ್ದ ಹೈದರಾಬಾದ್ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಕುಟುಂಬ ಸದಸ್ಯರು ಏ.14 ರಂದು ಬೌದ್ಧ ಧರ್ಮವನ್ನು ಸ್ವೀಕರಿಸಲಿದ್ದಾರೆ.
ಏ.14 ರಂದು ಸಂವಿಧಾನ  ಶಿಲ್ಪಿ  ಬಿ ಆರ್ ಅಂಬೇಡ್ಕರ್ ಜನ್ಮದಿನವಾಗಿದ್ದು, ಇದೇ ದಿನದಂದು ರೋಹಿತ್ ವೇಮುಲಾ ತಾಯಿ, ಸಹೋದರ ಮುಂಬೈ ನಲ್ಲಿ ಬೌದ್ಧ ಧರ್ಮಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಅಂಬೇಡ್ಕರ್ ಅವರ ಮೊಮ್ಮಗ, ಮಾಜಿ ಸಂಸದ ಪ್ರಕಾಶ್ ಅಂಬೇಡ್ಕರ್ ಅವರ ಪ್ರಕಾರ ರೋಹಿತ್ ತಾಯಿ ಹಾಗೂ ಸಹೋದರನಿಗೆ ಬೌದ್ಧ ಭಿಕ್ಷುವೋಬ್ಬರು ದೀಕ್ಷೆ ನೀಡಲಿದ್ದಾರೆ.  
ಮಹಾರಾಷ್ಟ್ರದ ದಾದರ್ ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ಮಧ್ಯಾಹ್ನ ನಡೆಯಲಿರುವ ಸಮಾರಂಭದಲ್ಲಿ ರೋಹಿತ್ ವೇಮುಲಾ ತಾಯಿ, ಸಹೋದರನಿಗೆ ಭೌದ್ಧ ಧರ್ಮಗುರುಗಳು ದೀಕ್ಷೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ರೋಹಿತ್ ವೆಮುಲಾ ಅವರ ಕುಟುಂಬ ಸದಸ್ಯರೇ ಮನವಿ ಮಾಡಿದ ಹಿನ್ನೆಲೆಯಲ್ಲಿ ದೀಕ್ಷಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಾಶ್ ಅಂಬೇಡ್ಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT