ಅಗ್ನಿ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ 
ದೇಶ

ಕೊಲ್ಲಂ ಅಗ್ನಿ ದುರಂತ: ಮೋದಿ, ರಾಹುಲ್ ಭೇಟಿಗೆ ಆಕ್ಷೇಪಿಸಿದ್ದ ಪೊಲೀಸ್ ಮಹಾ ನಿರ್ದೇಶಕ

ಕೇರಳದಲ್ಲಿ ಅಗ್ನಿ ದುರಂತ ಸಂಭವಿಸಿದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವುದಕ್ಕೆ ಕೇರಳ ಪೋಲಿಸ್ ಮಹಾನಿರ್ದೇಶಕ ಟಿ.ಪಿ. ಸೇನ್'ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು.

ತಿರುವನಂತಪುರಮ್: ಕೇರಳದಲ್ಲಿ ಅಗ್ನಿ ದುರಂತ ಸಂಭವಿಸಿದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವುದಕ್ಕೆ  ಕೇರಳ ಪೋಲಿಸ್ ಮಹಾನಿರ್ದೇಶಕ ಟಿ.ಪಿ. ಸೇನ್'ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ.
ಪೊಲೀಸ್ ಮಹಾ ನಿರ್ದೇಶಕ ಸೇನ್ ಕುಮಾರ್ ಅವರೇ ಹೇಳಿರುವ ಮಾಹಿತಿ ಪ್ರಕಾರ ಅಗ್ನಿ ದುರಂತ ಸಂಭವಿಸಿದ ಪ್ರದೇಶದಲ್ಲಿ ನಡೆಯುತ್ತಿದ್ದ ರಕ್ಷಣಾ ಕಾರ್ಯಾಚರಣೆಗೆ ಪೊಲೀಸ್ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಅಥವಾ ಇನ್ನಿತರ ವಿವಿಐಪಿ ಗಳಿಗೆ ಹೆಚ್ಚಿನ ಭದ್ರತೆ ಒದಗಿಸುವುದು ಕಷ್ಟ ಸಾಧ್ಯವಾಗಿತ್ತು. ಆದ್ದರಿಂದ ಪ್ರಧಾನಿ ಮೋದಿ ಅವರ ಭೇಟಿಯನ್ನು ಮುಂದೂಡುವಂತೆ ಸಲಹೆ ನೀಡಿದ್ದರು ಎಂದು ತಿಳಿದುಬಂದಿದೆ.
ಸೇನ್ ಕುಮಾರ್ ಅವರ ಸಲಹೆಯಂತೆ ಡಿಜಿಪಿ, ಪ್ರಧಾನಿ ಮೋದಿ ಅವರ ಭೇಟಿಯನ್ನು ಒಂದು ದಿನ ಮುಂದೂಡುವಂತೆ ಎಸ್ ಪಿಜಿ ಗೆ ಮನವಿ ಮಾಡಿದ್ದರು, ಆದರೆ ಡಿಜಿಪಿಯ ಮನವಿಯನ್ನು ನಿರಾಕರಿಸಿದ ಎಸ್ ಪಿಜಿ ತಂಡ ಪ್ರಧಾನಿ ನರೇಂದ್ರ ಮೋದಿ ಅವರು ಅಂದೇ ಭೇಟಿ ನೀಡಲು ನಿರ್ಧರಿಸಿದ್ದಾರೆಂದು ಕಾರಣ ನೀಡಿತ್ತು ಎಂದು ತಿಳಿದುಬಂದಿದೆ.  ಕೇವಲ ಮೋದಿ ಅವರ ಭೇಟಿಯನ್ನು ಮಾತ್ರವಲ್ಲದೇ, ರಾಹುಲ್ ಗಾಂಧಿ ಅವರ ಭೆಟಿಗೂ ಸೇನ್ ಕುಮಾರ್  ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.
ಅಗ್ನಿ ದುರಂತವನ್ನು ತಡೆಗಟ್ಟಲು ವಿಫಲರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ  ಸೂಚಿಸಿದ್ದ ತಮ್ಮ ಶಿಫಾರಸ್ಸನ್ನು ಸರಿಯಾಗಿ ಕಾರ್ಯಗತಗೊಳಿಸಿಲ್ಲ ಎಂದು ಗೃಹ ಇಲಾಖೆ ಕಾರ್ಯದರ್ಶಿ ನಳಿನಿ ನೆಟ್ಟೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT