ದೇಶ

ಕಾಶ್ಮೀರದಲ್ಲಿ ಪ್ರತಿಭಟನಾನಿರತರ ಮೇಲೆ ಗೋಲಿಬಾರ್, ವಿದ್ಯಾರ್ಥಿ ಸಾವು

Lingaraj Badiger
ಶ್ರೀನಗರ: ಹಿಂಸಾಚಾರದಲ್ಲಿ ತೊಡಗಿದ್ದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳು ನಡೆಸಿದ ಗೋಲಿಬಾರ್​ನಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಶುಕ್ರವಾರ ನಡೆದಿದೆ.
ಹಂದ್ವಾರದಲ್ಲಿ ಯುವತಿಗೆ ಯೋಧ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ನಡೆಸಿದ ಹಿಂಸಾತ್ಮಕ ಪ್ರತಿಭಟನೆ ವೇಳೆ ನಾಲ್ವರು ಮೃತಪಟ್ಟಿದ್ದನ್ನು ಖಂಡಿಸಿ ಇಂದು ಕುಪ್ವಾರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಆದರೆ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಕೆಲವರು ಭದ್ರತಾ ಪಡೆಗಳತ್ತ ಕಲ್ಲು ತೋರಾಟ ನಡೆಸಿದ್ದಾರೆ.
ಪ್ರತಿಭಟನಾ ನಿರತರನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಘಟನೆಯಲ್ಲಿ ಗುಂಡು ತಗುಲಿ ನಾಲ್ವರು ಗಾಯಗೊಂಡಿದ್ದರು. ಇವರ ಪೈಕಿ ಓರ್ವ ಯುವಕ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಮಂಗಳವಾರ ಯುವತಿಯೊಬ್ಬಳು ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ್ದ ವೇಳೆ ಯೋಧ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ನಂತರ ಈ ಪ್ರದೇಶದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.
SCROLL FOR NEXT