ನೋಯ್ಡಾ: ನೋಯ್ಡಾದಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದ್ದು, ಬಿಎಂಡಬ್ಲ್ಯೂ ಕಾರಿನ ಅತಿ ವೇಗಕ್ಕೆ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ದೆಹಲಿ ಹಿಂಟ್ ಅಂಡ್ ರನ್ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ನೋಯ್ಡಾದಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತವಾಗುತ್ತಿದ್ದಂತೆಯೇ ಕಾರನ್ನು ಚಲಾಯಿಸುತ್ತಿದ್ದ ವ್ಯಕ್ತಿ ಕಾರು ಬಿಟ್ಟು ಪರಾರಿಯಾಗಿದ್ದು, ಬಿಎಂಡಬ್ಲ್ಯೂ ಕಾರು ದೆಹಲಿ ಮೂಲದ್ದು ಎಂದು ತಿಳಿದುಬಂದಿದೆ. ಪ್ರಸ್ತುತ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಳೆದ ಏಪ್ರಿಲ್ 4 ರಂದು 32 ವರ್ಷದ ಸಿದ್ಧಾರ್ಥ ಶರ್ಮಾ ಎಂಬ ವ್ಯಕ್ತಿ ರಸ್ತೆ ದಾಟುತ್ತಿದ್ದಾಗ ಹಿಂದಿನಿಂದ ಬಂದ ಮರ್ಸಿಡೀಜ್ ಬೆಂಜ್ ಕಾರು ಅವರಿಗೆ ಅಪ್ಪಳಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಸಿದ್ಧಾರ್ಥ್ ಶರ್ಮಾ ಸ್ಥಳದಲ್ಲೇ ಅಸು ನೀಗಿದ್ದರು.