ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಡಿಎಂಕೆ ಪಕ್ಷದ 200 ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಪ್ರಕರಣ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ತಮಿಳುನಾಡಿನ ಡಿಎಂಕೆ ಪಕ್ಷದ 200 ಕಾರ್ಯಕರ್ತರು ಹಾಗೂ ನಾಲ್ವರು ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ತಮಿಳುನಾಡು
Srinivas Rao BV
Updated On : 17 Apr 2016, 6:24 am

ಸೇಲಂ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ತಮಿಳುನಾಡಿನ ಡಿಎಂಕೆ ಪಕ್ಷದ 200 ಕಾರ್ಯಕರ್ತರು ಹಾಗೂ ನಾಲ್ವರು ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಆಯೋಗದಿಂದ ಅನುಮತಿ ಪಡೆಯದೇ ಗುಂಪುಗಳಲ್ಲಿ ಸೇರಿ  ಸಾರ್ವಜನಿಕ ಸ್ಥಳಗಳಲ್ಲಿ ಕಿರಿಕಿರಿ ಉಂಟುಮಾಡಿದ್ದಾಗಿ ಡಿಎಂಕೆ ಪಕ್ಷದ 200 ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಏ.15 ರಂದು ಡಿಎಂಕೆ ಮಾಜಿ ಸಚಿವ ದಿವಂಗತ ವೀರಪಾಂಡಿ ಅರುಮುಗಮ್ ಅವರ ಪರವಾಗಿ ಘೋಷಣೆ ಕೂಗಿದ್ದಕ್ಕೆ ಡಿಎಂಕೆ ಪಕ್ಷದ ಕಾರ್ಯಕರ್ತರ ಎರಡು ಬಣಗಳ ನಡುವೆ ವಾಗ್ವಾದ ನಡೆದಿತ್ತು.
ಮೇ.16 ರಂದು ನಡೆಯಲಿರುವ ಚುನಾವಣೆಗಾಗಿ ಡಿಎಂಕೆ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಪ್ರಚಾರದ ವೇಳೆ ಡಿಎಂಕೆ ಕಾರ್ಯಕರ್ತರು ಮಾಜಿ ಸಚಿವ ಆರುಮುಗಮ್ ಪರವಾಗಿ ಘೋಷಣೆ ಕೂಗಲು ಪ್ರಾರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಎರಡು ಬಣಗಳ ನಡುವೆ ಘರ್ಷಣೆ ಉಂಟಾಗಿತ್ತು. ಸಾರ್ವಜನಿಕ ಪ್ರದೇಶದಲ್ಲಿ ಘರ್ಷಣೆಗೆ ಕಾರಣವಾಗಿದ್ದ 200 ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಈಗ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments