ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ದೇಶ

ಈಕ್ವೆಡಾರ್ ನಲ್ಲಿ ಪ್ರಬಲ ಭೂಕಂಪ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ನಲ್ಲಿ ಸಂಭವಿಸಿರುವ ಪ್ರಬಲ ಭೂಕಂಪ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ

ನವದೆಹಲಿ: ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ನಲ್ಲಿ ಸಂಭವಿಸಿರುವ ಪ್ರಬಲ ಭೂಕಂಪ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭೂಕಂಪದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಕ್ಕೆ ಸಂತಾಪ ಸೂಚಿಸುತ್ತಿದ್ದೇನೆ. ಘಟನೆ ವೇಳೆ ಗಾಯಗೊಂಡವರು ಶೀಘ್ರದಲ್ಲಿ ಗುಣಮುಖರಾಗರಾಗಲಿ. ಭೂಕಂಪದಲ್ಲಿ ಸಂಭವಿಸಿರುವ ಆಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಹಾನಿ ಕಡಿಮೆ ಮಟ್ಟದ್ದಾಗಿರಲಿ ಎಂದು ಭಯಸುತ್ತೇನೆಂದು ಹೇಳಿದ್ದಾರೆ.

ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ರಾಜಧಾನಿ ಕ್ವಿಟೋ ಕರಾವಳಿ ತೀರದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪನ ಇಂದು ಬೆಳಿಗ್ಗೆ ಸಂಭವಿಸಿದ್ದು,  ಫೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಸುನಾಮಿ  ಸಂಭವಿಸುವ ಕುರಿತು ಎಚ್ಚರಿಕೆ ರವಾನಿಸಿದೆ. ಭೂಕಂಪದ ಪರಿಣಾಮ ಈಕ್ವೆಡಾರ್ ನಲ್ಲಿ ಹಲವು ಕಟ್ಟಡಗಳು ನೆಲಕ್ಕುರುಳಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ನೂರಾರು ಬೃಹತ್ ಕಟ್ಟಡಗಳು ನೆಲಕ್ಕುರುಳಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಶಂಕೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು