ಉತ್ತರಾಖಂಡ್ ಹೈಕೋರ್ಟ್, ಹರೀಶ್ ರಾವತ್
ನೈನಿತಾಲ್: ಉತ್ತರಾಖಂಡ್ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ಸೋಮವಾರ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ತೀರಾ ವಿಶೇಷ ಪ್ರಕರಣಗಳಲ್ಲಿ ಮಾತ್ರ ಮಧ್ಯಪ್ರವೇಶ ಮಾಡುವಂತೆ ಸೂಚಿಸಿದೆ.
ರಾಷ್ಟ್ರಪತಿ ಆಡಳಿತವನ್ನು ಪ್ರಶ್ನಿಸಿ ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಹಾಗೂ ನ್ಯಾಯಮೂರ್ತಿ ವಿ.ಕೆ.ಬಿಸ್ಟ್ ಅವರನ್ನೊಳಗೊಂಡ ಪೀಠ, 9 ಶಾಸಕರ ಅನರ್ಹತೆ ಬಗ್ಗೆ ಹಾಗೂ ಉತ್ತರಾಖಂಡ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದಿದೆ.
ಮತ್ತೊಂದು ಪಕ್ಷ ಆಡಳಿತದಲ್ಲಿರುವ ರಾಜ್ಯದಲ್ಲಿ ಕೇಂದ್ರ ಅನಗತ್ಯ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ತುರ್ತು ಅಧಿಕಾರಗಳನ್ನು ವಿಶೇಷ ವಿಶೇಷ ಪ್ರಕರಣಗಳಲ್ಲಿ ಮಾತ್ರ ಬಳಸಬೇಕು. ರಾಜ್ಯಪಾಲರು ಕೇಂದ್ರದ ಏಜೆಂಟರಲ್ಲ ಎಂದು ಕೋರ್ಟ್ ಹೇಳಿದೆ.
ಕೇಂದ್ರದ ಪರವಾಗಿ ಅಟರ್ನಿ ಜನರಲ್ ಮುಖುಲ್ ರೋಹಟ್ಗಿ ಅವರು ವಿಚಾರಣೆಗೆ ಹಾಜರಾಗಿದ್ದರು.