ಅರವಿಂದ್ ಕೇಜ್ರಿವಾಲ್ 
ದೇಶ

ಓಲಾ, ಉಬರ್ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದರೆ ಕಠಿಣ ಕ್ರಮ:ಕೇಜ್ರಿವಾಲ್

ಓಲಾ, ಊಬರ್ ಟ್ಯಾಕ್ಸಿಗಳು ದೆಹಲಿ ಸರ್ಕಾರ ನಿಗದಿಪಡಿಸಿದಕ್ಕಿಂತ ಹೆಚ್ಚು ದರ ವಿಧಿಸಿದರೆ ಆ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು

ನವದೆಹಲಿ: ಓಲಾ, ಊಬರ್ ಟ್ಯಾಕ್ಸಿಗಳು ದೆಹಲಿ ಸರ್ಕಾರ ನಿಗದಿಪಡಿಸಿದಕ್ಕಿಂತ ಹೆಚ್ಚು ದರ ವಿಧಿಸಿದರೆ ಆ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅವರು ಸೋಮವಾರ ಎಚ್ಚರಿಸಿದ್ದಾರೆ.
ಆ್ಯಪ್ ಆಧಾರಿತ ಓಲಾ, ಊಬರ್  ಟ್ಯಾಕ್ಸಿ ಸೇವೆಗಳಲ್ಲಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ದರ ವಿಧಿಸಿದರೆ ಪರವಾನಗಿ ರದ್ದತಿಯೊಂದಿಗೆ ವಾಹನಗಳ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಕೇಜ್ರೀವಾಲ್ ಟ್ವಿಟ್ ಮೂಲಕ ಎಚ್ಚರಿಸಿದ್ದಾರೆ.
ಓಲಾ ಮತ್ತು ಊಬರ್ ಸಂಸ್ಥೆಗಳು ಸಂಚಾರ ದಟ್ಟಣೆ ಅವಧಿಯಲ್ಲಿ ನಿಗದಿತ ಶುಲ್ಕಕ್ಕಿಂತ ಹೆಚ್ಚು ಶುಲ್ಕ ವಿಧಿಸುತ್ತಿರುವ ಬಗ್ಗೆ ಸರ್ಕಾರಕ್ಕೆ ಸಾರ್ವಜನಿಕರಿಂದ ಹಲವು ದೂರುಗಳು ಬಂದಿವೆ. ಅಲ್ಲದೆ ಸಮ-ಬೆಸ ಯೋಜನೆ ಜಾರಿಗೊಳಿಸಿದ ಸಮಯದಲ್ಲಿ ಹೆಚ್ಚು ದರಗಳನ್ನು ವಿಧಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರು ಈ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!