ನರೇಂದ್ರ ಮೋದಿ 
ದೇಶ

2.2 ಲಕ್ಷ ಜನರಿಗೆ ಕೇಂದ್ರ ಸರ್ಕಾರದ ಉದ್ಯೋಗ; ಮೋದಿ ಸರ್ಕಾರದ ಕ್ರಮ

ಕೇಂದ್ರ ಸರ್ಕಾರದ ಉದ್ಯೋಗಗಳನ್ನು ಎದುರುನೋಡುತ್ತಿರುವವರಿಗೆ ಒಳ್ಳೆಯ ದಿನಗಳು ಬರುವ ಸೂಚನೆ ಇದೆ.

ನವದೆಹಲಿ: ಕೇಂದ್ರ ಸರ್ಕಾರದ ಉದ್ಯೋಗಗಳನ್ನು ಎದುರುನೋಡುತ್ತಿರುವವರಿಗೆ ಒಳ್ಳೆಯ ದಿನಗಳು ಬಂದಿವೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2 .2 ಲಕ್ಷ ಜನರಿಗೆ ಕೇಂದ್ರ ಸರ್ಕಾರದ ಉದ್ಯೋಗಗಳನ್ನು ನೀಡಲು ಮುಂದಾಗಿದೆ. ಎರಡು ವರ್ಷಗಳ ಕಾಲ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಮಾರ್ಚ್.1 2015 ರಲ್ಲಿ ಒಟ್ಟು 33 .05 ಲಕ್ಷ ಕೇಂದ್ರ ಸರ್ಕಾರದ ನೌಕರರಿದ್ದರು. 2016 ರಲ್ಲಿ 34 .93 ಲಕ್ಷಕ್ಕೆ ಏರಿಕೆಯಾಗಿದೆ. 2017 ರ ವೇಳೆಗೆ ಈ ಸಂಖ್ಯೆ 35 .23 ರಷ್ಟಾಗಲಿದೆ ಎಂದು ಅಂದಾಜಿಸಲಾಗಿದೆ.
ಕಂದಾಯ ಇಲಾಖೆಯಲ್ಲಿ 70 ಸಾವಿರ ನೇಮಕಾತಿ ನಡೆಯಲಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನೇಮಕಾತಿ ನಡೆಯುವ ಇಲಾಖೆಯಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ. 2014 ರ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಭರವಸೆ ಈಡೇರಿಕೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ  2 .2 ಲಕ್ಷ ಜನರಿಗೆ ಕೇಂದ್ರ ಸರ್ಕಾರದ ಉದ್ಯೋಗಗಳನ್ನು ನೀಡಲು ಮುಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ': ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ' UAE ಶ್ಲಾಘನೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಭೂಕಬಳಿಕೆ ಆರೋಪದ ನಡುವೆ ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?