ಪಾಟ್ನಾ: ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರೇ 2019 ರ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿ, ಅದರಲ್ಲಿ ಎರಡನೇ ಯೋಚನೆಯಿಲ್ಲ ಎಂದು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ.
ಕಳೆದ ವರ್ಷ ಆರ್ ಜೆಡಿ- ಜೆಡಿಯು ಮೈತ್ರಿಯೊಂದಿಗೆ ಬಿಹಾರ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಮಹಾಮೈತ್ರಿ ಕೂಟ ಬಹುಮತ ಗಳಿಸಿ ಸರ್ಕಾರ ರಚನೆ ಮಾಡಿತತ್ತು. ಈ ಹಿನ್ನೆಲೆಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಲಾಲೂ ನಿತೀಶ್ ಕುಮಾರ್ ಅವರೇ ಮುಂದಿನ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ್ದಾರೆ.
ರಾಜಕೀಯ ಬದ್ಧ ವೈರಿಗಳಾಗಿದ್ದ ನಿತೀಶ್ ಕುಮಾರ್ ಮತ್ತು ಲಾಲೂ ಪ್ರಸಾದ್ ಸ್ನೇಹಿತರಾಗಿ ಬಿಹಾರದಲ್ಲಿ ಸರ್ಕಾರ ರಚಿಸಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯ ಮೋದಿ ವಿರುದ್ಧ ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿಸಲು ಹೊರಟಿದ್ದ ಕಾಂಗ್ರೆಸ್ ಗೆ ಜೆಡಿಯು ಅಧ್ಯಕ್ಷರಾಗಿ ನಿತೀಶ್ ಕುಮಾರ್ ಮತ್ತೆ ಆಯ್ಕೆಯಾಗಿರುವುದು ದೊಡ್ಡ ತಲೆ ನೋವಾಗಿದೆ.