ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜವಡೇಕರ್ 
ದೇಶ

ಬರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕೇಂದ್ರ ಸಿದ್ಧ: ಜವಡೇಕರ್

ದೇಶದಲ್ಲಿ ಎದುರಾಗಿರುವ ಬರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಸಿದ್ಧವಿದ್ದು, ಇಂತಹ ಸಂದರ್ಭಗಳನ್ನು ಎದುರಿಸಲು ಆರ್ಥಿಕತೆಯಲ್ಲಿ ಸ್ಥಿತಿಸ್ಥಾಪಕತ್ವ ರಚನೆಗೆ ತಯಾರಿ ನಡೆಸುತ್ತಿದೆ ಎಂದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜವಡೇಕರ್...

ನವದೆಹಲಿ: ದೇಶದಲ್ಲಿ ಎದುರಾಗಿರುವ ಬರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಸಿದ್ಧವಿದ್ದು, ಇಂತಹ ಸಂದರ್ಭಗಳನ್ನು ಎದುರಿಸಲು ಆರ್ಥಿಕತೆಯಲ್ಲಿ ಸ್ಥಿತಿಸ್ಥಾಪಕತ್ವ ರಚನೆಗೆ ತಯಾರಿ ನಡೆಸುತ್ತಿದೆ ಎಂದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜವಡೇಕರ್ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಪ್ರಸ್ತುತ ದೇಶದಲ್ಲಿ ಸಂಭವಿಸಿರುವ ಬರಗಾಲ ಪರಿಸ್ಥಿತಿ ಭೀಕರವಾಗಿದ್ದು, ದೇಶದ ಶೇ.25 ರಷ್ಟು ಜನರ ಮೇಲೆ ಪರಿಣಾಮ ಬೀರಿದೆ. ನೈಸರ್ಗಿಕ ವಿಪತ್ತಿನಿಂದಾಗಿ ಎರಡು ವರ್ಷಗಳಿಂದ ಸತತವಾಗಿ ಬರಗಾಲ ಸಂಭವಿಸಿದೆ. ಜಾಗತಿಕ ಎಚ್ಚರಿಕೆ ಮತ್ತು ಹವಾಮಾನ ಬದಲಾವಣೆ ಬರಗಾಲಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರ ಪೀಡಿತ ರಾಜ್ಯಗಳಿಗೆ ಪರಿಹಾರ ನೀಡುವುದರೊಂದಿಗೆ ಈ ಸಮಸ್ಯೆ ಎದುರಿಸಲು ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆಸಿದೆ. ಅಲ್ಲದೆ, ಇಂತಹ ಸಂದರ್ಭಗಳನ್ನು ಎದುರಿಸಲು ಆರ್ಥಿಕತೆಯಲ್ಲಿ ಸ್ಥಿತಿಸ್ಥಾಪಕತ್ವ ರಚನೆಗೆ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!