ಖಾಸಗಿ ಜಾಹೀರಾತಿನಲ್ಲಿ ಮೋದಿ ಫೋಟೋ ಬಳಕೆ 
ದೇಶ

ಅನುಮತಿ ಪಡೆಯದೇ ಜಾಹೀರಾತಿನಲ್ಲಿ ಮೋದಿ ಫೋಟೋ ಬಳಕೆ: ಕ್ಷಮೆ ಕೇಳಿದ ಪುಣೆ ಉದ್ಯಮಿ

ಅನುಮತಿ ಪಡೆಯದೆ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರ ಫೋಟೋ ಬಳಕೆ ಮಾಡಿದ ಪ್ರಕರಣಕ್ಕೆ....

ಪುಣೆ:  ಅನುಮತಿ ಪಡೆಯದೆ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರ ಫೋಟೋ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ಮ್ಯಾಪಲ್ ರಿಯಲ್ ಎಸ್ಟೇಟ್ ಗ್ರೂಪ್ ಮೋದಿ ಅವರ ಕ್ಷಮೆ ಯಾಚಿಸಿದೆ.

ಮ್ಯಾಪಲ್ ಗ್ರೂಪ್ ಕಡಿಮೆ ವೆಚ್ಚದ ಮನೆ ನಿರ್ಮಿಸುತ್ತಿದ್ದು, ಕೇವಲ 5 ಲಕ್ಷ ರೂ.ಗೆ ಮನೆ ನೀಡುವುದಾಗಿ ಜಾಹೀರಾತು ನೀಡಿತ್ತು. ಈ ಜಾಹೀರಾತಿನಲ್ಲಿ ನರೇಂದ್ರ ಮೋದಿ ಮತ್ತು ದೇವೇಂದ್ರ ಫಡ್ನವಿಸ್ ಅವರ ಫೋಟೋ ಬಳಕೆ ಮಾಡಿಕೊಳ್ಳಲಾಗಿತ್ತು. ಜತೆಗೆ ಇದನ್ನು ಸರ್ಕಾರ ಯೋಜನೆಯಲ್ಲಿ ನಿರ್ಮಿಸುತ್ತಿರುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಮ್ಯಾಪಲ್ ಗ್ರೂಪ್ ನೀಡಿರುವ ಜಾಹೀರಾತಿನ ಕುರಿತು ತನಿಖೆ ನಡೆಸುವಂತೆ ಆದೇಶಿಸಿತ್ತು.

 ಅನುಮತಿ ಪಡೆಯದೆ ಫೋಟೋ ಬಳಕೆ ಮಾಡಿದ್ದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ನಮ್ಮಿಂದಾಗಿರುವ ತಪ್ಪನ್ನು ನಾವು ತಿದ್ದಿಕೊಳ್ಳುತ್ತೇವೆ ಎಂದು ಮ್ಯಾಪಲ್ ಗ್ರೂಪ್ ಅಧ್ಯಕ್ಷ ಸಚಿನ್ ಅಗರ್ವಾಲ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ