ಪಶ್ಚಿಮ ಬಂಗಾಳ ಚುನಾವಣೆ: ಮತದಾನದ ವೇಳೆ ಕಚ್ಚಾ ಬಾಂಬ್ ಸ್ಫೋಟ, ಓರ್ವ ಸಾವು 
ದೇಶ

ಪಶ್ಚಿಮ ಬಂಗಾಳ ಚುನಾವಣೆ: ಮತದಾನದ ವೇಳೆ ಕಚ್ಚಾ ಬಾಂಬ್ ಸ್ಫೋಟ, ಓರ್ವ ಸಾವು

ಏ.21 ರಂದು ಪಶ್ಚಿಮ ಬಂಗಾಳದ ವಿಧಾನಸಭೆಗೆ ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಬಾಂಬ್ ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.

ಕೋಲ್ಕತಾ: ಏ.21 ರಂದು ಪಶ್ಚಿಮ ಬಂಗಾಳದ ವಿಧಾನಸಭೆಗೆ ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಬಾಂಬ್ ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.
ಮುರ್ಷಿದಾಬಾದ್ ನಲ್ಲಿ  ಮತದಾನ ನಡೆಯುತ್ತಿದ್ದ ವೇಳೆ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು  ಸಿಪಿಐ-ಎಂ ಕಾರ್ಯಕರ್ತ ಮತದಾನದ ಏಜೆಂಟ್ ತಹಿದುಲ್ ಇಸ್ಲಾಂ (30) ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಕಚ್ಚಾ ಬಾಂಬ್ ಸ್ಫೋಟದಿಂದ ವ್ಯಕ್ತಿ ಮೃತಪಟ್ಟಿರುವುದಾಗಿ ಕಂಡುಬಂದಿದ್ದು ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಪಿಐ(ಎಂ) ತಹಿದುಲ್ ಇಸ್ಲಾಂ ನನ್ನು ಹತ್ಯೆಗೆ ತೃಣಮೂಲ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪ ಮಾಡಿದ್ದು ಆಡಳಿತ ಪಕ್ಷ ಟಿಎಂಸಿ ಆರೋಪವನ್ನು ನಿರಾಕರಿಸಿದೆ. " ಚುನಾವಣೆಯಲ್ಲಿ ಸೋಲುವ ಭಯದಿಂದ ಟಿಎಂಸಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದೆ. ಪರಿಣಾಮ ತಹಿದುಲ್ ಇಸ್ಲಾಂ ಹತ್ಯೆ ನಡೆದಿದೆ ಎಂದು ಸಿಪಿಐ-ಎಂ ನ ಅಭ್ಯರ್ಥಿ ರೆಹಮಾನ್ ಹೇಳಿದ್ದಾರೆ.
ಆದರೆ ಆರೋಪವನ್ನು ನಿರಾಕರಿಸಿರುವ ಟಿಎಂಸಿ ಸಿಪಿಐ-ಎಂ- ಕಾಂಗ್ರೆಸ್ ನಡುವಿನ ಘರ್ಷಣೆಯಿಂದ ಸಾವು ಸಂಭವಿಸಿದೆ ಎಂದು ಪ್ರತ್ಯಾರೋಪ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್