ಮಹಿಳೆ ಜೊತೆ ಮಧ್ಯ ಪ್ರದೇಶ ಗೃಹ ಸಚಿವರ ಅನುಚಿತ ವರ್ತನೆ ? ವೈರಲ್ ಆಯ್ತು ವಿಡಿಯೋ
ಮಧ್ಯಪ್ರದೇಶ ಹಿರಿಯ ಸಚಿವ ಬಾಬುಲಾಲ್ ಗೌರ್ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಭೂಪಾಲ್: ಮಧ್ಯಪ್ರದೇಶ ಹಿರಿಯ ಸಚಿವ ಬಾಬುಲಾಲ್ ಗೌರ್ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗೃಹ ಸಚಿವ ಬಾಬುಲಾಲ್ ಕೌರ್ ಬಸ್ ಹತ್ತುತ್ತಿದ್ದ ಮಹಿಳೆಯ ಪೃಷ್ಠವನ್ನು ಕೈಯ್ಯಿಂದ ಸ್ಪರ್ಶಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಕಾರ್ಯಕ್ರಮವೊಂದಕ್ಕೆ ತೆರಳಲು ಬಸ್ ಹತ್ತುತ್ತಿದ್ದ ಮಹಿಳೆಯ ಹಿಂಭಾಗವನ್ನು ಬಾಬುಲಾಲ್ ಕೌರ್ ಕೈಯ್ಯಿಂದ ಮುಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಹಿರಿಯ ಸಚಿವರೊಬ್ಬರ ಅನುಚಿತ ವರ್ತನೆಗೆ ಎಲ್ಲೆಡೆಯಿಂದ ಟೀಕೆಗಳು ಕೇಳಿ ಬರುತ್ತಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.