ತಾಂತ್ರಿಕ ದೋಷ: ಹೈದರಾಬಾದ್ ನಲ್ಲಿ ಸ್ಪೈಸ್ ಜೆಟ್ ತುರ್ತು ಭೂಸ್ಪರ್ಶ
ತಾಂತ್ರಿಕ ದೋಷ ಹಿನ್ನೆಲೆ ಸ್ಪೈಸ್ ಜೆಟ್ ವಿಮಾನ ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ...
ಹೈದರಾಬಾದ್: ತಾಂತ್ರಿಕ ದೋಷ ಹಿನ್ನೆಲೆ ಸ್ಪೈಸ್ ಜೆಟ್ ವಿಮಾನ ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೈದರಾಬಾದ್ ನಿಂದ ತಿರುಪತಿಗೆ ಹೊರಟಿದ್ದ ವಿಮಾನ ಟೇಕ್ ಆಫ್ ಕೆಲ ನಿಮಿಷಗಳಲ್ಲೇ ತಾಂತ್ರಿಕ ದೋಷವನ್ನು ಗುರುತಿಸಿದ ಪೈಲಟ್ ವಿಮಾನವನ್ನು ತುರ್ತು ಭೂಸ್ಫರ್ಶ ಮಾಡಿಸಿದ್ದಾರೆ.
ಪೈಲಟ್ ನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಇನ್ನು ಪ್ರಯಾಣಿಕರು ಸುರಕ್ಷಿತರಾಗಿದ್ದು, ಅವರ ಪ್ರಯಾಣಕ್ಕೆ ಬೇರೆ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.