ವಾಟ್ಸಾಪ್ 
ದೇಶ

ವಾಟ್ಸಾಪ್ ಗ್ರೂಪ್ ಹೆಸರು ಬದಲಾಯಿಸಿದ್ದಕ್ಕೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ

ವಾಟ್ಸಾಪ್ ಗ್ರೂಪ್ ನ ಹೆಸರು ಬದಲಾಯಿಸಿದ್ದಕ್ಕೆ ನಡೆದ ಹೊಡೆದಾಟದಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ.

ಪುಣೆ: ವಾಟ್ಸಾಪ್ ಗ್ರೂಪ್ ನ ಹೆಸರು ಬದಲಾಯಿಸಿದ್ದಕ್ಕೆ ನಡೆದ ಹೊಡೆದಾಟದಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ.

ಪುಣೆಯ ಗಾರ್ವಾರೆ ಕಾಲೇಜಿನ ಶುಕ್ರವಾರ ಈ ಘಟನೆ ನಡೆದಿದೆ. ಜಗಳದಲ್ಲಿ  ಅಕ್ಷಯ್ ದಿನಕರ್ ಎಂಬಾತ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಿಬಿಎ ವಿದ್ಯಾರ್ಥಿ ಸಂಕೇತ್ ಸಾಲುಂಕೆ ಎಂಬಾತ ಪ್ರಕರಣ ದಾಖಲಿಸಿದ್ದಾನೆ.

ಗುರುವಾರ ಸಂಕೇತ್ ಸಾಲುಂಕೆ ಹುಟ್ಟುಹಬ್ಬವಿತ್ತು. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಗ್ರೂಪ್ ನ ಹೆಸರು ಬದಲಾಯಿಸಲಾಗಿತ್ತು. ಇದರಿಂದ ವಿದ್ಯಾರ್ಥಿಯೊಬ್ಬ ಗ್ರೂಪ್ ಹೆಸರು ಬದಲಿಸಿದ್ದಕ್ಕೆ ಆಕ್ರೋಶ ವ್ಯಕ್ತ ಪಡಿಸಿದ್ದಾನೆ. ಈ ವಿಚಾರವಾಗಿ ದೂರುದಾರ ಸಂಕೇತ್ ಸಾಲುಂಕೆ ಸ್ನೇಹಿತ ದಿನಕರ್ ಹಾಗೂ ಆರೋಪಿ ನಡುವೆ ವಾಗ್ವಾದ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಮರುದಿನ ಬೆಳಗ್ಗೆ ಕಾಲೇಜಿನಲ್ಲಿ ಮುಖಾಮುಖಿಯಾದಾಗ ಇಬ್ಬರ ನಡುವೆ ಜಗಳ ನಡೆದಿದೆ. ಆರೋಪಿ ವಿದ್ಯಾರ್ಥಿ ತನ್ನ ಸ್ನೇಹಿತರ ಜೊತೆ ಸೇರಿಕೊಂಡು ಮರದ ವಸ್ತುಗಳಿಂದ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಅಕ್ಷಯ್ ದಿನಕರ್ ಈಗ ಚೇತರಿಸಿ ಕೊಳ್ಳುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  ಈ ಸಂಬಂಧ 22 ಮಂದಿ ವಿರುದ್ಧ ಕೇಸು ದಾಖಲಾಗಿದ್ದು, 5 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್