ಏ.26 ರಂದು ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ 
ದೇಶ

ಏ.26 ರಂದು ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ

ಹಲವು ದಿನಗಳ ಅನಿಶ್ಚಿತತೆ ನಂತರ ಕೊನೆಗೂ ಭಾರತ- ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಸಭೆ ನಿಗದಿಯಾಗಿದೆ.

ನವದೆಹಲಿ: ಹಲವು ದಿನಗಳ ಅನಿಶ್ಚಿತತೆ ನಂತರ ಕೊನೆಗೂ ಭಾರತ- ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿದೆ.

ಏ.26 ರಂದು ಹಾರ್ಟ್ ಆಫ್ ಏಷ್ಯಾ ಸಮ್ಮೇಳನದ ಸಂದರ್ಭದಲ್ಲಿ ಪಾಕ್- ಭಾರತೀಯ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಅಹ್ಮದ್ ಚೌಧರಿ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸಲು ನವದೆಹಲಿಗೆ ಆಗಮಿಸುತ್ತಿದ್ದು ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಸಮ್ಮೇಳನದಲ್ಲಿ ಭಾಗವಹಿಸಲಿರುವ ಇನ್ನೂ ಅನೇಕ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳೊಂದಿಗೆ ಅಜೀಜ್ ಅಹ್ಮದ್ ಚೌಧರಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಜ. 2 ರಂದು ಪಠಾಣ್ ಕೋಟ್ ವಾಯು ನೆಲೆಯಲ್ಲಿ ಉಗ್ರರ ದಾಳಿ ನಡೆದ ನಂತರ ಪಾಕಿಸ್ತಾನ- ಭಾರತದ ನಡುವೆ ನಡೆಯಬೇಕಿದ್ದ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ಸ್ಥಗಿತಗೊಂಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್