ಸಾಂದರ್ಭಿಕ ಚಿತ್ರ 
ದೇಶ

ಅಪ್ರಾಪ್ತ ಬಾಲಕಿ ಮೇಲೆ ನೆರೆಮನೆಯಾತನಿಂದಲೇ ಅತ್ಯಾಚಾರ

4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲು ಯತ್ನಿಸಿದ್ದ ಘಟನೆಯೊಂದು ದೆಹಲಿಯ ಕಲ್ಯಾಣ್ ಪುರಿಯಲ್ಲಿ ಶನಿವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ...

ನವದೆಹಲಿ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲು ಯತ್ನಿಸಿದ್ದ ಘಟನೆಯೊಂದು ದೆಹಲಿಯ ಕಲ್ಯಾಣ್ ಪುರಿಯಲ್ಲಿ ಶನಿವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅತ್ಯಾಚಾರಕ್ಕೊಳಗಾದ ಬಾಲಕಿ ಶನಿವಾರ ಮಧ್ಯಾಹ್ನ ತನ್ನ ಅಜ್ಜಿಯ ಪಕ್ಕದಲ್ಲಿ ಮಲಗಿದ್ದ ವೇಳೆ ಯಾರಿಗೂ ತಿಳಿಯದಂತೆ ಮನೆಗೆ ಬಂದಿರುವ ಕಾಮುಕ ನೆರೆಮನೆಯಾತ ಶಬ್ಧ ಮಾಡದಂತೆ ಬಾಲಕಿಯನ್ನು ಹೊತ್ತೊಯ್ದಿದ್ದಾನೆ. ನಂತರ ಪಕ್ಕದಲ್ಲಿಯೇ ಇದ್ದ ತನ್ನ ಮನೆಯ ರೂಮಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ಇದರಂತೆ ಬಾಲಕಿ ಕೂಗಾಡಿದಾಗ ಬಾಲಕಿಯ ಕತ್ತು ಹಿಸಿಕಿದ್ದಾನೆ.

ಬಾಲಕಿ ಪ್ರಜ್ಞೆ ತಪ್ಪಿ ಬಿದ್ದಾಗ ಬಾಲಕಿ ಸತ್ತು ಹೋಗಿದ್ದಾಳೆಂದು ತಿಳಿದು ಬಾಲಕಿಯನ್ನು ಮಹಡಿಯಿಂದ ಕೆಳಗೆ ಹಾಕಲು ಹೋಗಿದ್ದಾನೆ. ಈ ವೇಳೆ ಕಟ್ಟಡದ ಕೆಳಗೆ ಸಾಕಷ್ಟು ಮಂದಿ ಇದ್ದ ಕಾರಣ ಹೇಗಿದ್ದರೂ ಬಾಲಕಿ ಸತ್ತು ಹೋಗಿದ್ದಾಳೆಂದು ತಿಳಿದು ಮತ್ತೆ ಬಾಲಕಿಯ ಅಜ್ಜಿಯ ಪಕ್ಕದಲ್ಲಿ ಮಲಗಿಸಿ ಓಡಿಹೋಗಲು ನೋಡಿದ್ದಾನೆ.

ಈ ವೇಳೆ ಎಚ್ಚರಗೊಂಡಿರುವ ಅಜ್ಜಿ ಬಾಲಕಿಯ ಸ್ಥಿತಿಯನ್ನು ನೋಡಿ ಗಾಬರಿಯಿಂದ ಕೂಗಿದ್ದಾಳೆ. ನಂತರ ಕಾಮುಕನಿಗೆ ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ್ದಾರೆ.

ಪ್ರಸ್ತುತ ಬಾಲಕಿಯನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಬಾಲಕಿಯ ತಂದೆ ತಾಯಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಘಟನೆ ನಡೆದಾಗ ಇಬ್ಬರು ಕೆಲಸಕ್ಕೆ ಹೋದ ಕಾರಣ ಬಾಲಕಿ ತನ್ನ ಅಜ್ಜಿಯ ಮನೆಯಲ್ಲಿದ್ದಳು.

ಘಟನೆ ನಂತರ ಸ್ಥಳೀಯರು ಅತ್ಯಾಚಾರಿಯನ್ನು ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ಅತ್ಯಾಚಾರಿಯ ವಿರುದ್ಧ ಅತ್ಯಾಚಾರ, ಕೊಲೆಗೆ ಯತ್ನ, ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!