ದೇಶ

ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್: 11 ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಬಂಧನ

Vishwanath S

ಸೂರತ್‌: ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವಲ್ಲಭ ವಿದ್ಯಾನಗರದಲ್ಲಿ 11 ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಎಪ್ರಿಲ್ 21 ಮತ್ತು 22 ರಂದು ದಮನ್ ಮತ್ತು ಆನಂದ್ ನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆರೋಪಿಗಳು ಇನ್‌ಸ್ಟಾಗ್ರಾಂ ಸಾಮಾಜಿಕ ಜಾಲ ತಾಣದಲ್ಲಿ ಹುಡುಗಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದು 11 ವಿದ್ಯಾರ್ಥಿಗಳ ಹೆಸರನ್ನು ಸಂತ್ರಸ್ತ ಯುವತಿ ಪೊಲೀಸರಿಗೆ ನೀಡಿದ್ದು, ಅದರಂತೆ ಪೊಲೀಸರು ಅಹಮದಾಬಾದ್, ಭಾವನಗರ್, ಸೂರತ್ ಮತ್ತು ವಡೋದರ ಮೂಲದವರಾದ 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಸಂತ್ರಸ್ತ ಯುವತಿ ದೂರಿನಲ್ಲಿ ಎಪ್ರಿಲ್ 21 ರಂದು ದಮನ್ ನ ಭೀಮಪುರದಲ್ಲಿ ವಿದ್ಯಾರ್ಥಿಗಳು ತನ್ನನ್ನು ಅಪಹರಿಸಿ ಕಾರಿನಲ್ಲಿ ಕರೆದೊಯ್ದರು. 22ರಂದು ವಲ್ಲಭ ವಿದ್ಯಾನಗರದಲ್ಲಿನ ಬಾಡಿಗೆ ಅಪಾರ್ಟ್ ಮೆಂಟ್ ಒಂದರಲ್ಲಿ ಕೂಡಿ ಹಾಕಿ ಒಬ್ಬೊಬ್ಬರಾಗಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ಕುರಿತು ಯಾರಿಗಾದರೂ ತಿಳಿಸಿದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದರು ಎಂದು ದೂರಿದ್ದಾಳೆ.

ಹುಡುಗಿಯನ್ನು ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಲಾಗಿದ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಸಾಬೀತಾಗಿದೆ.

SCROLL FOR NEXT