ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಅಡುಗೆ, ಪೂಜೆ ಮಾಡಬೇಡಿ: ಬಿಹಾರ ಸರ್ಕಾರದ ಆದೇಶ
ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೂ ಅಡುಗೆ, ಪೂಜೆ ಹಾಗೂ ಹೋಮ ಹವನಗಳನ್ನು ಮಾಡದಂತೆ ಬಿಹಾರ ಸರ್ಕಾರ ಆದೇಶ ಹೊರಡಿಸಿದೆ....
ಪಾಟ್ನಾ: ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೂ ಅಡುಗೆ, ಪೂಜೆ ಹಾಗೂ ಹೋಮ ಹವನಗಳನ್ನು ಮಾಡದಂತೆ ಬಿಹಾರ ಸರ್ಕಾರ ಆದೇಶ ಹೊರಡಿಸಿದೆ.
ಬಿಸಿಗಾಳಿಯಿಂದಾಗಿ ಸಂಭವಿಸುತ್ತಿರುವ ಬೆಂಕಿ ಅವಘಡಗಳನ್ನು ತಡೆಯಲು ಸರ್ಕಾರ ಈ ಆದೇಶ ಹೊರಡಿಸಿದೆ. ಬಿಹಾರದಲ್ಲಿ ಸುಮಾರು 2500 ಗುಡಿಸಲುಗಳಿಗೆ ಬೆಂಕಿ ಬಿದ್ದು 36 ಜನರು ಮೃತಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ನಂತರ ಈ ಸಲಹೆ ನೀಡಿದ್ದಾರೆ.
ಗ್ರಾಮೀಣ ಭಾಗದಲ್ಲಿ ವಾಸಿಸುವವರಿಗೆ ಹಗಲಿನ ವೇಳೆ ಆಹಾರ ತಯಾರಿಸದಂತೆ, ಪೂಜೆ-ಹವನ ಮಾಡದಂತೆ ಮತ್ತು ಹೊಲದಲ್ಲಿ ಬೆಳೆಯ ಉಳಿಕೆಗಳಿಗೆ ಬೆಂಕಿ ಹಚ್ಚದಂತೆ ಬಿಹಾರ ಸರ್ಕಾರ ಸಲಹೆ ನೀಡಿದೆ. ಬಿಸಿಗಾಳಿ ಹೆಚ್ಚಾಗಿರುವುದರಿಂದ ಬೆಂಕಿ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು ಎಂದು ನೈಸರ್ಗಿಕ ವಿಕೋಪ ನಿರ್ವಹಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.