ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದ ಫಲಾನುಭವಿಗಳು ಯಾರು ಎಂಬುದನ್ನು ಬಹಿರಂಗಪಡಿಸುವಂತೆ ಆಗ್ರಹಿಸಿದ್ದಾರೆ.
ವಿವಿಐಪಿ ಹೆಲಿಕಾಫ್ಟರ್ ಪೂರೈಕೆಗಾಗಿ ಲಂಚ ನೀಡಲಾಗಿತ್ತು ಎಂಬುದು ಇಟಾಲಿ ಕೋರ್ಟ್ ಮೂಲಕ ಸಾಬೀತಾಗಿದೆ. ಈ ಬಗ್ಗೆ ನಾನು ಯಾರಿಗೂ ಹೆದರುವುದಿಲ್ಲ ಎಂದು ಹೇಳುವ ಬದಲು, ಲಂಚ ಪಡೆದಿದ್ದು ಯಾರೆಂಬುದನ್ನು ಹೇಳಲಿ ಎಂದು ಅಮಿತ್ ಶಾ ಒತ್ತಾಯಿಸಿದ್ದಾರೆ.
ಹೆಲಿಕಾಫ್ಟರ್ ಒಪ್ಪಂದ ನಡೆದಾಗ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ, ಈಗ ಅವರೇ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಅಮಿತ್ ಶಾ ತಿಳಿಸಿದ್ದಾರೆ. ಸಂಸತ್ ಕಲಾಪದಲ್ಲಿ ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಫ್ಟರ್ ಹಗರಣದಲ್ಲಿ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಮಾತಾಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಾನು ಯಾರಿಗೂ ಹೆದರುವುದಿಲ್ಲ ಎಂದು ತಿಳಿಸಿದ್ದರು.