ಕೊಲಂಬೋ: ಶ್ರೀಲಂಕಾ ನೌಕಾಪಡೆ 21 ಮೀನುಗಾರರನ್ನು ಬಂಧಿಸಿದೆ.
ದ್ವೀಪ ರಾಷ್ಟ್ರಕ್ಕೆ ಸೇರಿದ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರನ್ನು ಬಂಧಿಸಲಾಗಿದ್ದು ಕನಿಷ್ಠ 3 ಮೀನುಗಾರಿಕೆ ಬೋಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಮೀನುಗಾರರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ.
ತಮಿಳುನಾಡಿನ ಸಮುದ್ರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸಲು ತೆರಳುವ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಜಲಗಡಿ ದಾಟಿದ ಆರೋಪದಲ್ಲಿ ಪದೇ ಪದೇ ಬಂಧಿಸುತ್ತಿದೆ. ಇತ್ತೀಚೆಗೆ ತಮಿಳುನಾಡು ಮೀನುಗಾರರ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದ್ದರು.