ಅರವಿಂದ್ ಕೇಜ್ರಿವಾಲ್ 
ದೇಶ

ಕಾಪ್ಟರ್ ಹಗರಣ; ತಾಕತ್ತಿದ್ದರೆ ಬಿಜೆಪಿ ಸೋನಿಯಾ ಗಾಂಧಿಯನ್ನು ಬಂಧಿಸಲಿ: ಕೇಜ್ರಿವಾಲ್

ಬಿಜೆಪಿಗೆ ತಾಕತ್ತಿದ್ದರೆ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಇಟಲಿ...

ನವದೆಹಲಿ: ಬಿಜೆಪಿಗೆ ತಾಕತ್ತಿದ್ದರೆ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಇಟಲಿ ಕೋರ್ಟ್ ತೀರ್ಪಿನಲ್ಲಿ ಪ್ರಸ್ತಾಪಿತವಾಗಿರುವ ಪಕ್ಷದ ಇತರೆ ನಾಯಕರನ್ನು ಬಂಧಿಸಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಸವಾಲು ಹಾಕಿದ್ದಾರೆ.
'ಈ ಕೆಲಸವನ್ನು ಬಿಜೆಪಿ ಯಾವತ್ತೂ ಮಾಡುವುದಿಲ್ಲ. ಬಿಜೆಪಿ ಐದು ವರ್ಷಗಳ ಕಾಲ ಅವರ ವಿರುದ್ಧ ಬರೀ ಘೋಷಣೆ ಕೂಗಲಿದೆ' ಎಂದು ದೆಹಲಿ ಸಿಎಂ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ಕೇಜ್ರಿವಾಲ್, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇದುವರೆಗೂ ಕಾಂಗ್ರೆಸ್ ನಾಯಕರ ಮನೆ, ಕಚೇರಿಗಳ ಮೇಲೆ ಏಕೆ ದಾಳಿ ನಡೆಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇಟಲಿ ಕೋರ್ಟ್ ತೀರ್ಪಿನಲ್ಲಿ ಪ್ರಸ್ತಾಪಿತವಾಗಿರುವ ವ್ಯಕ್ತಿಗಳನ್ನು ಈ ಕೂಡಲೇ ಬಂಧಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಕೇಜ್ರಿವಾಲ್ ಆಗ್ರಹಿಸಿದ್ದಾರೆ. 
ಇಟಲಿ ಕೋರ್ಟ್ ತೀರ್ಪಿನಲ್ಲಿ ಸೋನಿಯಾ ಗಾಂಧಿ ಹಾಗೂ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್‌ ಪಟೇಲ್‌ ಮತ್ತು ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್.ಪಿ.ತ್ಯಾಗಿ ಅವರ ಹೆಸರುಗಳು ಪ್ರಸ್ತಾಪವಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!