ಲಖನೌ: ಪ್ರಧಾನಿ ನರೇಂದ್ರ ಮೋದಿ ಒಂದು ದಿನದ ಉತ್ತರ ಪ್ರದೇಶ ಪ್ರವಾಸ ಕೈಗೊಂಡಿದ್ದಾರೆ.
ಪ್ರಧಾನಮಂತ್ರಿ ಉಜ್ವಲ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಿಂದ ಮುಂದಿನ ಮೂರು ವರ್ಷಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ 5 ಕೋಟಿ ಮಹಿಳೆಯರಿಗೆ ಎಲ್ ಪಿಜಿ ಸಂಪರ್ಕ ದೊರೆಯಲಿದೆ.
ಯೋಜನೆಗೆ ಚಾಲನೆ ನೀಡಿದ ನಂತರ ವಾರಾಣಸಿಗೆ ತೆರಳಲಿರುವ ಪ್ರಧಾನಿ ಮೋದಿ, ಇ- ರಿಕ್ಷಾ ಹಾಗೂ ಇ- ಬೋಟ್ ಗಳನ್ನು ವಿತರಿಸಲಿದ್ದಾರೆ. ಈ ಬಳಿಕ ಸಾಂಸ್ಕೃತಿಕ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಜ್ಞಾನ್ ಪ್ರವಾಹ್ ಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ವಾರಾಣಸಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.