ದೇವೇಂದ್ರ ಫಡ್ನವೀಸ್ 
ದೇಶ

ನಾನು ಅಖಂಡ ಮಹಾರಾಷ್ಟ್ರದ ಮುಖ್ಯಮಂತ್ರಿ: ಶಿವಸೇನೆಗೆ ದೇವೇಂದ್ರ ಫಡ್ನವೀಸ್

ವಿದರ್ಭ ಪ್ರತ್ಯೇಕ ರಾಜ್ಯದ ವಿಷಯದಲ್ಲಿ ಶಿವಸೇನೆ ವಾಗ್ದಾಳಿಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, "ನಾನು ಅಖಂಡ ಮಹಾರಾಷ್ಟ್ರದ ಮುಖ್ಯಮಂತ್ರಿ" ಎಂದು ಹೇಳಿದ್ದಾರೆ.

ಮುಂಬೈ: ಪ್ರತ್ಯೇಕ ವಿದರ್ಭ ರಾಜ್ಯದ ವಿಷಯದಲ್ಲಿ ಶಿವಸೇನೆ ವಾಗ್ದಾಳಿಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, "ನಾನು ಅಖಂಡ ಮಹಾರಾಷ್ಟ್ರದ ಮುಖ್ಯಮಂತ್ರಿ" ಎಂದು ಹೇಳಿದ್ದಾರೆ.  

ವಿಧಾನಸಭೆಯಲ್ಲಿ ವಿದರ್ಭ ವಿಷಯ ಪ್ರಸ್ತಾಪವಾದಾಗ ಮಾತನಾಡಿದ ಸಿಎಂ ದೇವೇಂದ್ರ ಫಡ್ನವೀಸ್ ಗೆ ವಿದರ್ಭ ಪ್ರತ್ಯೇಕ ರಾಜ್ಯದ ಕೂಗಿನ ಬಗ್ಗೆ ಸಿಎಂ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಶಿವಸೇನೆ ಸದಸ್ಯರು ಆಗ್ರಹಿಸಿದರು, ಶಿವಸೇನೆಗೆ ಪ್ರತಿಕ್ರಿಯೆ ನೀಡಿರುವ ದೇವೇಂದ್ರ ಫಡ್ನವೀಸ್, ಪ್ರತ್ಯೇಕ ವಿದರ್ಭ ರಾಜ್ಯಕ್ಕೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ, ನಾನು ಅಖಂಡ ಮಹಾರಾಷ್ಟ್ರದ ಮುಖ್ಯಮಂತ್ರಿ, ಬಾಕಿ ಇರದ ವಿಷಯವನ್ನು ಚರ್ಚಿಸುವುದು ಸೂಕ್ತವಲ್ಲ ಎಂದು ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.

ಬಿಜೆಪಿ ಸಣ್ಣ ರಾಜ್ಯಗಳ ರಚನೆ ಮಾಡುವುದರ ಪರವಾಗಿದ್ದರೆ, ಶಿವಸೇನೆ ಅದಕ್ಕೆ ವಿರುದ್ಧವಾಗಿದೆ, ಎರಡೂ ಪಕ್ಷಗಳು ಈಗ ಮಹಾರಾಷ್ಟ್ರದ ಸರ್ಕಾರದಲ್ಲಿವೆ, ವಿದರ್ಭ ರಾಜ್ಯ ರಚನೆ ಬಗ್ಗೆ ಸರ್ಕಾರ ಯಾವುದೇ ನಿಲುವು ಹೊಂದಿಲ್ಲ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT