ಸೋನಿಯಾ ಗಾಂಧಿ ಅರೋಗ್ಯ ಚೇತರಿಕೆಗಾಗಿ ಪ್ರಧಾನಿ ಪ್ರಾರ್ಥನೆ
ಸೋನಿಯಾ ಗಾಂಧಿ ಅವರ ಆರೋಗ್ಯ ಚೇತರಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥಿಸಿದ್ದಾರೆ.
ನವದೆಹಲಿ: ತೀವ್ರ ಜ್ವರದ ಹಿನ್ನೆಲೆಯಲ್ಲಿ ಅರ್ಧದಲ್ಲಿಯೇ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿದ್ದ ರೋಡ್ ಶೋದಿಂದ ನಿರ್ಗಮಿಸಿದ ಸೋನಿಯಾ ಗಾಂಧಿ ಅವರ ಆರೋಗ್ಯ ಚೇತರಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ವಾರಾಣಸಿಗೆ ಭೇಟಿ ನೀಡಿದ ವೇಳೆ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯ ಉಂಟಾಗಿದೆ ಎಂದು ತಿಳಿಯಿತು, ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಾಣಸಿಯಲ್ಲಿ ಚುನಾವಣಾ ರೋಡ್ ಶೋ ಗೆ ಚಾಲನೆ ನೀಡಿದ್ದ ಸೋನಿಯಾ ಗಾಂಧಿ ಅವರು ಆದರೆ ತೀವ್ರ ಜ್ವರದ ಹಿನ್ನೆಲೆಯಲ್ಲಿ ಅರ್ಧದಲ್ಲಿಯೇ ರೋಡ್ ಶೋದಿಂದ ನಿರ್ಗಮಿಸಿದರು.