ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರ ಮೌನ ದಲಿತರ ಮೇಲಿನ ದೌರ್ಜನ್ಯ ಹೆಚ್ಚಲು ಕಾರಣವಾಗಿದೆ ಎಂದು ರಾಜಸ್ತಾನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ಆರೋಪಿಸಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ರಾಜಸ್ತಾನ ಮತ್ತು ಗುಜರಾತ್ ನಲ್ಲಿ ನಡೆದ ಪ್ರಕರಣಗಳು ಬಿಜೆಪಿಯ ದ್ವಂದ್ವ ನೀತಿಯನ್ನು ಬಹಿರಂಗ ಪಡಿಸುತ್ತಿವೆ ಎಂದು ಸಚಿನ್ ಪೈಲಟ್ ಟೀಕಿಸಿದ್ದಾರೆ.
ಬಿಜೆಪಿ ಆಡಳಿತಾವಧಿಯಲ್ಲಿ ದಲಿತರಿಗೆ ರಕ್ಷಣೆ ಇಲ್ಲದಂತಾಗಿ ಭಯದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿರುವ ಅವರು,ನರೇಂದ್ರ ಮೋದಿ ಮತ್ತು ಬಿಜೆಪಿ ಹಿರಿಯ ನಾಯಕರು ಮೌನಕ್ಕೆ ಶರಣಾಗಿರುವುದರಿಂದ ದಲಿತರ ಮೇಲಿನ ದೌರ್ಜನ್ಯ ಹೆಚ್ಚಲು ಮತ್ತಷ್ಟು ಕಾರಣವಾಗಿದೆ ಎಂದು ಅವರು ದೂರಿದ್ದಾರೆ.