ಅಮಿತ್ ಶಾ ಗುಜರಾತ್ ಸಿಎಂ ಆಗುವುದಿಲ್ಲ: ಬಿಜೆಪಿ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಜರಾತ್ ಸಿಎಂ ಆಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಬಿಜೆಪಿ ಸ್ಪಷ್ಟನೆ ನೀಡಿದೆ.
ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಜರಾತ್ ಸಿಎಂ ಆಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಬಿಜೆಪಿ ಸ್ಪಷ್ಟನೆ ನೀಡಿದ್ದು ಅಮಿತ್ ಶಾ ಗುಜರಾತ್ ಸಿಎಂ ಆಗುವುದಿಲ್ಲ ಎಂದು ಹೇಳಿದೆ.
ಗುಜರಾತ್ ನ ಮುಂದಿನ ಸಿಎಂ ಆಯ್ಕೆ ವಿಚಾರವಾಗಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆ ನಂತರ ಮಾತನಾಡಿರುವ ವೆಂಕಯ್ಯ ನಾಯ್ಡು ಅಮಿತ್ ಶಾ ಗುಜರಾತ್ ಸಿಎಂ ಆಗುವುದಿಲ್ಲ ಎಂಬ ಸ್ಪಷ್ಟನೆ ನೀಡಿದ್ದಾರೆ. ಗುಜರಾತ್ ನ ಮುಂದಿನ ಸಿಎಂ ಗುಜರಾತ್ ನ ಬಿಜೆಪಿ ಶಾಸಕರಲ್ಲೇ ಒಬ್ಬರಾಗಲಿದ್ದಾರೆ ಎಂದು ವೆಂಕಯ್ಯ ನಾಯ್ಡು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅಮಿತ್ ಶಾ ರಾಷ್ಟ್ರಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಪಕ್ಷ ಅವರ ನೇತೃತ್ವದಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ಪಕ್ಷಕ್ಕೆ ಅವರ ನೇತೃತ್ವದ ಅಗತ್ಯವಿದೆ, ಗುಜರಾತ್ ನ ಶಾಸಕರ ಪೈಕಿ ಒಬ್ಬರನ್ನು ಸಿಎಂ ಆಗಿ ಆಯ್ಕೆ ಮಾಡಲಾಗುತ್ತದೆ ಎಂದಿದ್ದಾರೆ. ಅಮಿತ್ ಶಾ ಗುಜರಾತ್ ನ ಸಿಎಂ ಆಗದೆ ಹೋದರೂ ಸಿಎಂ ಆಯ್ಕೆ ಪ್ರಕ್ರಿಯೆಯ ಭಾಗವಾಗಿರುವ ಶಾಸಕರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ ಸಹ ಗುಜರಾತ್ ಗೆ ವೀಕ್ಷಕರಾಗಿ ತೆರಳಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.