ಕಾಶ್ಮೀರದಲ್ಲಿ ಪ್ರತಿಭಟನಾ ನಿರತ ನಾಗರಿಕರ ಸಾವು: ಪರಿಸ್ಥಿತಿ ಉದ್ವಿಗ್ನ 
ದೇಶ

ಕಾಶ್ಮೀರದಲ್ಲಿ ಪ್ರತಿಭಟನಾ ನಿರತ ನಾಗರಿಕರ ಸಾವು: ಪರಿಸ್ಥಿತಿ ಉದ್ವಿಗ್ನ

ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನಾ ನಿರತರಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದು, ಕಣಿವೆಯಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಶ್ರೀನಗರ: ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ  ಪ್ರತಿಭಟನಾ ನಿರತರಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದು, ಕಣಿವೆಯಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನಾ ನಿರಂತರ ಮೇಲೆ ಪೊಲೀಸರು ಗುಂಡು ಹಾರಿಸಿದ ಪರಿಣಾಮ ಓರ್ವ ನಾಗರಿಕ ಮೃತಪಟ್ಟಿದ್ದು, ಮತ್ತೊಬ್ಬರಿಗೆ ತೀವ್ರ ಗಾಯಗಳಾಗಿವೆ. ಇದಕ್ಕೂ ಮುನ್ನ ಶ್ರೀನಗರದಲ್ಲಿ ಬ್ಯಾಂಕ್ ಎಟಿಎಂ ನ ಸೆಕ್ಯೂರಿಟಿ ಗಾರ್ಡ್ ನ್ನು ಮೊನಚಾದ ಶಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು, ಆದರೆ ಸ್ಥಳೀಯರು ಸೆಕ್ಯೂರಿಟಿ ಗಾರ್ಡ್ ನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಲು ಪ್ರಾರಂಭಿಸಿದ್ದಾರೆ.

ಪ್ರತಿಭಟನೆ ತಡೆಗಟ್ಟಲು ಪೊಲೀಸರು ಗುಂಡು ಹಾರಿಸಿದ್ದು, ಈ ವೇಳೆ ಓರ್ವ ವ್ಯಕ್ತಿ ಮೃತಪಟ್ಟಿದ್ದರೆ, ಮತ್ತೋರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯಿಂದ ಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು  ಕರ್ಫ್ಯೂ ವಿಧಿಸಲಾಗಿದೆ.

ಉಗ್ರ ಮುಜಾಫರ್ ಬುರ್ಹಾನ್ ವನಿ ಹತ್ಯೆಯನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಬಂದ್ ಆಗಸ್ಟ್ 5 ವರೆಗೆ ಮುಂದುವರೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ