ಅಖಿಲೇಶ್ ಯಾದವ್ 
ದೇಶ

ಬುಲಂದ್ ಶಹರ್ ಗ್ಯಾಂಗ್ ರೇಪ್ ಪ್ರಕರಣ ಸಿಬಿಐಗೆ ವಹಿಸಲು ಸಿದ್ಧ: ಅಖಿಲೇಶ್

ಬುಲಂದ್ ಶಹರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಯಿ ಮತ್ತು ಮಗಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ...

ಲಖನೌ: ಬುಲಂದ್ ಶಹರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಯಿ ಮತ್ತು ಮಗಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಪ್ರಕರಣವನ್ನು ಸಿಬಿಐಗೆ ವಹಿಸಲು ತಾವು ಸಿದ್ಧ ಎಂದು ಗುರುವಾರ ಹೇಳಿದ್ದಾರೆ.
ಯಾದವ್ ಸರ್ಕಾರ ಅಸಮರ್ಥ ಸರ್ಕಾರ ಎಂದಿದ್ದ ಬಿಜೆಪಿ ಅತ್ಯಾಚಾರ, ದರೋಡೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಅಖಿಲೇಶ್ ಯಾದವ್, ಪ್ರತಿಪಕ್ಷಗಳು ಅತ್ಯಾಚಾರ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂದು ವಾಗ್ದಾಳಿ ನಡೆಸಿದರು.
ಗ್ಯಾಂಗ್ ರೇಪ್ ಪ್ರಕರಣದ ಹಿಂದೆ ರಾಜಕೀಯ ಪಿತೂರಿ ಇದೆ ಎಂದಿದ್ದ ತಮ್ಮ ಸಂಪುಟದ ನಗರಾಭಿವೃದ್ಧಿ ಸಚಿವ ಮೊಹ್ಮದ್ ಅಜಂ ಖಾನ್ ಅವರ ಹೇಳಿಕೆಯನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡ ಸಿಎಂ, ಬಿಜೆಪಿ ನಾಯಕರು ಅತ್ಯಾಚಾರ ಸಂತ್ರಸ್ತೆಯ ಕುಟುಂಬದೊಂದಿಗೆ ರಹಸ್ಯ ಸಭೆ ನಡೆಸಿದ್ದು ಏಕೆ? ಎಂದು ಪ್ರಶ್ನಿಸಿದ್ದಾರೆ.
ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ದುರದೃಷ್ಟಕರ. ಆದರೆ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

IPL 2026: ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿದ BCCI! ಫೈನಲ್ ಪಂದ್ಯ ಎಲ್ಲಿ ಗೊತ್ತಾ?

1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯವಲ್ಲ: ವಯೋಮಿತಿಯಲ್ಲಿ ಸಡಿಲಿಕೆ; ಪೋಷಕರು ನಿರಾಳ!

IPL 2026: ಬೆಂಗಳೂರಿನಲ್ಲಿ ನಡೆಯುವ ಪಂದ್ಯಕ್ಕೆ ಶಾಸಕರಿಗೆ 4 ವಿಐಪಿ ಟಿಕೆಟ್ ಖಾತ್ರಿಗೆ ಸ್ಪೀಕರ್ ಯುಟಿ ಖಾದರ್ ನಿರ್ದೇಶನ!

Airbnb ಮೂಲಕ ಪೆಂಟ್‌ಹೌಸ್ ಬಾಡಿಗೆ ವಿವಾದ: ಜನರ ಮೇಲೆ ಕಾರು ಹತ್ತಿಸಿದ ತಂದೆ-ಮಗ; ಮಹಿಳಾ ಟೆಕ್ಕಿ ಸಾವು; ಭೀಕರ ದೃಶ್ಯ!

SCROLL FOR NEXT