ಲಕ್ನೋ: ಬುಲಂದ್ ಶಹರ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತರಿಗೆ 3 ಲಕ್ಷ ರು ಪರಿಹಾರ ಮತ್ತು ತಲಾ ಒಂದೊಂದು ಫ್ಲ್ಯಾಟ್ ನೀಡುವುದಾಗಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಘೋಷಿಸಿದ್ದಾರೆ.
ಪ್ರಕರಣವನ್ನು ವಿರೋಧ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದರ ವಿರುದ್ಧ ತಿಜಿ ಕಾರಿದ ಅಖಿಲೇಶ್ ಯಾದವ್, ಘಟನೆ ನಡೆದಿದ್ದು ದುರಾದೃಷ್ಟಕರ, ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಆದರೆ ಬಿಜೆಪಿ ಮತ್ತು ಇತರ ಪಕ್ಷಗಳು ಸಂತ್ರಸ್ತರಿಗೆ ಯಾಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ಇದುವರೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಲೀಮ್ ಬವಾರಿಯಾ ಮತ್ತು ಇನ್ನೊಬ್ಬ ಆರೋಪಿ ಇದುವರೆಗೂ ತಲೆ ಮರೆಸಿಕೊಂಡಿದ್ದು, ಪೊಲೀಸರು ಅವರಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.