ಕಾಶ್ಮೀರದಲ್ಲಿ ಪ್ರತಿಭಟನೆಯ ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಸತತ 28ನೇ ದಿನಕ್ಕೆ ಕಾಲಿಟ್ಟ ಕರ್ಫ್ಯೂ

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಕರ್ಫ್ಯೂ ಸತತ 28ನೇ ದಿನಕ್ಕೆ ಕಾಲಿಟ್ಟಿದೆ. ಜಮ್ಮುವಿನಲ್ಲಿ ಮೊಬೈಲ್ ಮತ್ತು ಇಂಟರ್ನೆಟ್...

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಕರ್ಫ್ಯೂ ಸತತ 28ನೇ ದಿನಕ್ಕೆ ಕಾಲಿಟ್ಟಿದೆ.
ಜಮ್ಮುವಿನಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ದೊಡ, ಬನಿಹಾಲ್, ಕಿಶ್ತ್ವಾರ್ ಮೊದಲಾದ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು, ವಹಿವಾಟು ಸ್ಥಗಿತಗೊಂಡಿವೆ.
1973ರ ಅಪರಾಧ ದಂಡಸಂಹಿತೆಯ ಸೆಕ್ಷನ್ 144ನ್ನು ಹೇರಲಾಗಿದೆ. ಇದರ ಪ್ರಕಾರ ಯಾವುದೇ ಪ್ರದೇಶದಲ್ಲಿ 10 ಜನಕ್ಕಿಂತ ಹೆಚ್ಚು ಮಂದಿ ಸೇರಿದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಮ್ಯಾಜಿಸ್ಟ್ರೇಟ್ ಗೆ ಅಧಿಕಾರವಿರುತ್ತದೆ. ಇದನ್ನು ಪುಲ್ವಾಮಾ, ಕುಲ್ಗಾಮ್ ಮತ್ತು ಶೊಪಿಯಾನ್ ಜಿಲ್ಲೆಗಳಲ್ಲಿ ಹೇರಲಾಗಿದೆ.
ಹಿಜ್ ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿಯನ್ನು ಜುಲೈ 8ರಂದು ಹತ್ಯೆ ಮಾಡಿದ್ದನ್ನು ಖಂಡಿಸಿ ಕಣಿವೆ ರಾಜ್ಯದಲ್ಲಿ ಆರಂಭಗೊಂಡ ಪ್ರತಿಭಟನೆ ಇನ್ನೂ ನಿಂತಿಲ್ಲ. ಇದುವರೆಗೆ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆ ಪೊಲೀಸರ ಮಧ್ಯೆ ನಡೆದ ಕದನದಲ್ಲಿ 50 ನಾಗರಿಕರು, ಇಬ್ಬರು ಪೊಲೀಸರು ಸೇರಿದಂತೆ 52 ಮಂದಿ ಹತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!