ರಾಜನಾಥ್ ಸಿಂಗ್ 
ದೇಶ

ಊಟ ಮಾಡಲು ಪಾಕಿಸ್ತಾನಕ್ಕೆ ಹೋಗಿರಲಿಲ್ಲ: ರಾಜನಾಥ್ ಸಿಂಗ್ ತಿರುಗೇಟು

ನಾನು ಪಾಕಿಸ್ತಾನಕ್ಕೆ ಊಟ ಮಾಡಲು ಹೋಗಿರಲಿಲ್ಲ, ಭಯೋತ್ಪಾದಕರ ಬಗ್ಗೆ ಭಾರತದ ನಿಲುವನ್ನು ತಿಳಿಸಲು ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಲು ತೆರಳಿದ್ದೆ ಎಂದು...

ನವದೆಹಲಿ: ನಾನು ಪಾಕಿಸ್ತಾನಕ್ಕೆ ಊಟ ಮಾಡಲು ಹೋಗಿರಲಿಲ್ಲ, ಭಯೋತ್ಪಾದಕರ ಬಗ್ಗೆ ಭಾರತದ ನಿಲುವನ್ನು ತಿಳಿಸಲು ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಲು ತೆರಳಿದ್ದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಸಂಸತ್ತಿನಲ್ಲಿ ವಿಪಕ್ಷಗಳ ಟೀಕೆಗೆ ಉತ್ತರಿಸಿದ ರಾಜ ನಾಥ್ ಸಿಂಗ್, ಭಯೋತ್ಪಾದಕ ಸಂಘಟನೆಗಳ ಭಾರತದ ನಿಲುವನ್ನು ಸ್ಪಷ್ಟ ಪಡಿಸಿದ್ದು, ಕೇವಲ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಂಡರೇ ಸಾಲದು, ಭಯೋತ್ಪಾದನೆಗೆ ಬೆಂಬಲ ನೀಡುವವರ ವಿರುದ್ಧವು ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾಗಿ ತಿಳಿಸಿದ್ದಾರೆ.

ಭಯೋತ್ಪಾದಕರನ್ನು ‘ಹುತಾತ್ಮ’ ಎಂದು ವೈಭವೀಕರಿಸುವುದು ಸಲ್ಲದು ಒಂದು ದೇಶದ ಉಗ್ರ ಹುತಾತ್ಮ ಇಲ್ಲವೇ ಸ್ವಾತಂತ್ರ್ಯ ಹೋರಾಟಗಾರ ಆಗಲು ಸಾಧ್ಯವಿಲ್ಲ. ಉಗ್ರರನ್ನು ಹುತಾತ್ಮರಾಗಿ ಬಿಂಬಿಸಲು ಸಾರ್ಕ್‌ ರಾಷ್ಟ್ರಗಳು ಮಾತ್ರವಲ್ಲ ಇಡೀ ಮಾನವ ಕುಲವೇ ಮುಂದಾಗಬಾರದು’ ಎಂದು ಮನವಿ ಮಾಡಿದರು.

ದಕ್ಷಿಣ ಏಷ್ಯಾ ದೇಶಗಳಲ್ಲಿ ಉತ್ತಮ ಪ್ರಾದೇಶಿಕ ಸಮೃದ್ಧಿ ಮತ್ತು ಸಹಕಾರದ ಅಗತ್ಯವಿದೆ. ಹೆಚ್ಚುತ್ತಿರುವ ಬೆದರಿಕೆ ಮತ್ತು ಉಗ್ರರ ಕೃತ್ಯಗಳು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಅಡ್ಡಿಯಾಗಿವೆ. ಪಠಾಣ್‌ಕೋಟ್‌, ಢಾಕಾ, ಕಾಬೂಲ್‌  ಮತ್ತಿತರ ಕಡೆಗಳಲ್ಲಿ ನಡೆದ ಭಯೋತ್ಪಾದಕರ ದಾಳಿಗಳು ದಕ್ಷಿಣ ಏಷ್ಯಾ ದೇಶದ ಶಾಂತಿ ಕದಡಿವೆ’ ಎಂದು ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!