ಆಡಳಿತಾತ್ಮಕ ಮುಖ್ಯಸ್ಥರ ಬಗ್ಗೆ ದೆಹಲಿ ತೀರ್ಪನ್ನು ಸುಪ್ರೀಂ ನಲ್ಲಿ ಪ್ರಶ್ನಿಸಲಿರುವ ಕೇಜ್ರಿವಾಲ್ ಸರ್ಕಾರ
ಲೆಫ್ಟಿನೆಂಟ್ ಗೌರ್ನರ್ ದೆಹಲಿಯ ಆಡಳಿತಾತ್ಮಕ ಮುಖ್ಯಸ್ಥ ಎಂಬ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು....
ನವದೆಹಲಿ: ಲೆಫ್ಟಿನೆಂಟ್ ಗೌರ್ನರ್ ದೆಹಲಿಯ ಆಡಳಿತಾತ್ಮಕ ಮುಖ್ಯಸ್ಥ ಎಂಬ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿದೆ.
ಇನ್ನೊಂದು ವಾರದೊಳಗೆ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ದೆಹಲಿ ಸರ್ಕಾರ ತೀರ್ಮಾನಿಸಿದೆ ಎಂದು ಸುಪ್ರೀಂ ಕೋರ್ಟ್ ನ ನ್ಯಾ. ಎನ್.ವಿ ರಮಣ ಹಾಗೂ ನ್ಯಾ.ಎ.ಕೆ ಸಿಕ್ರಿ ಅವರ ವಿಭಾಗೀಯ ಪೀಠ ದೆಹಲಿ ಸರ್ಕಾರದ ಅರ್ಜಿಯನ್ನು ವಿಚಾರಣೆ ನಡೆಸಿರುವುದಾಗಿ ಹೇಳಿದೆ ಎಂದು ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ತಿಳಿಸಿದ್ದಾರೆ.
ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ದೆಹಲಿ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು ಒಂದು ವಾರದ ಅವಧಿಯಲ್ಲಿ ದೆಹಲಿ ನ್ಯಾಯಾಲಯದ ತೀರ್ಪನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ ಎಂದು ಇಂದಿರಾ ಜೈಸಿಂಗ್ ಮಾಹಿತಿ ನೀಡಿದ್ದಾರೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್(ಎಲ್ಜಿ) ಅಧಿಕಾರಗಳನ್ನು ಪ್ರಶ್ನಿಸಿ ಆಪ್ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶರಾದ ಜಿ ರೋಹಿಣಿ ಮತ್ತು ಜಯಂತ್ ನಾಥ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿ, ಲೆಫ್ಟಿನೆಂಟ್ ಗವರ್ನರ್ ದೆಹಲಿಯ ಆಡಳಿತಾತ್ಮಕ ಮುಖ್ಯಸ್ಥ ಎಂದು ಮಹತ್ವದ ತೀರ್ಪು ನೀಡಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.