ದೇಶ

2014 ರಲ್ಲಿ 12 ಸಾವಿರಕ್ಕೂ ಹೆಚ್ಚು ರೈತರ ಆತ್ಮಹತ್ಯೆ!

2014 ರಲ್ಲಿ ದೇಶಾದ್ಯಂತ 12 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ನವದೆಹಲಿ: 2014 ರಲ್ಲಿ ದೇಶಾದ್ಯಂತ 12 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ಅಂಕಿ-ಅಂಶಗಳನ್ನು ಮೇಲ್ಮನೆಯಲ್ಲಿ ಮಂಡಿಸಿದ ಕೃಷಿ ಸಚಿವ ರಾಧಾ ಮೋಹನ್ ಸಿಂಗ್, 2014 ರಲ್ಲಿ 5,650 ರೈತರು ಹಾಗೂ 6,000 ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಸಾಲಿನಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ 12 ಸಾವಿರಕ್ಕೂ ಹೆಚ್ಚು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.  ರೈತರ ಆತ್ಮಹತ್ಯೆ ಬಗ್ಗೆ ಸಂಸದರು ರಾಜ್ಯಸಭೆಯ ಕಲಾಪದಲ್ಲಿ ಆತಂಕ ವ್ಯಕ್ತಪಡಿಸಿದ್ದು, ರಾಜ್ಯಸಭೆಗೆ ಉತ್ತರ ನೀಡಿರುವ ಸಚಿವ ರಾಧಾಮೋಹನ್ ಸಿಂಗ್, ರೈತರ ಆದಾಯವನ್ನು ಹೆಚ್ಚುವಂತೆ ಮಾಡುವುದು ಆತ್ಮಹತ್ಯೆಗಳನ್ನು ತಡೆಗಟ್ಟಲು ಇರುವ ಪರಿಹಾರವಾಗಿದ್ದು, ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ; ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಸಿದ್ದರಾಮಯ್ಯ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

SCROLL FOR NEXT