ದಾಂಟೇವಾಡ: ಪೊಲೀಸರೊಂದಿಗೆ ನಡೆದ ಗುಂಡಿನ ಘರ್ಷಣೆಯಲ್ಲಿ 3 ಮಂದಿ ಮಾವೋವಾದಿಗಳು ಸಾವಿಗೀಡಾಗಿರುವ ಘಟನೆ ಛತ್ತೀಸ್ ಗಢದ ನಡೆದಿದೆ.
ಛತ್ತೀಸ್ ಗಢದ ದಾಂಟೇವಾಡ ಹಾಗೂ ಬಿಜಾಪುರ ಜಿಲ್ಲೆಯ ಗಡಿಯಲ್ಲಿನ ಅರಣ್ಯದಲ್ಲಿ ನಕ್ಸಲರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಈ ವೇಳೆ ಪೊಲೀಸರತ್ತ ಮಾವೋವಾದಿಗಳು ಏಕಾಏಕಿ ಮನಸೋ ಇಚ್ಛೆ ಗುಂಡಿನ ಸುರಿಮಳೆಗರೆದರು. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದಾಗ ಓರ್ವ ಮಹಿಳೆ ಸೇರಿ 3 ಮಂದಿ ಮಾವೋವಾದಿಗಳು ಹತರಾದರು ಎಂದು ಪೊಲೀಸರು ತಿಳಿಸಿದ್ದಾರೆ.