ದಯಾಶಂಕರ್ ಸಿಂಗ್ 
ದೇಶ

ಮಾಯಾ ವಿರುದ್ಧ ಅವಹೇಳನಕಾರಿ ಹೇಳಿಕೆ: ದಯಾಶಂಕರ್ ಸಿಂಗ್ ಗೆ ಜಾಮೀನು

ಬಿಎಸ್ಪಿ ನಾಯಕಿ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಜೈಲು ಪಾಲಾಗಿದ್ದ ಬಿಜೆಪಿ ಉಚ್ಛಾಟಿತ ನಾಯಕ ದಯಾಶಂಕರ್...

ಲಖನೌ: ಬಿಎಸ್ಪಿ ನಾಯಕಿ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಜೈಲು ಪಾಲಾಗಿದ್ದ ಬಿಜೆಪಿ ಉಚ್ಛಾಟಿತ ನಾಯಕ ದಯಾಶಂಕರ್ ಸಿಂಗ್ ಅವರಿಗೆ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಮಾಯಾವತಿ ಅವರು ಒಬ್ಬ ವೇಶ್ಯೆಗಿಂತಲೂ ಕಡೆ ಎಂದಿದ್ದ ದಯಾಶಂಕರ್ ಸಿಂಗ್ ವಿರುದ್ಧ ಎಸ್ ಸಿ/ಎಸ್ ಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸುಮಾರು 10 ದಿನಗಳ ಕಾಲ ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ದಯಾಶಂಕರ್ ಸಿಂಗ್ ಅವರನ್ನು ಜುಲೈ 29ರಂದು ಬಕ್ಸರ್ ನಲ್ಲಿ ಬಂಧಿಸಲಾಗಿತ್ತು.
ಮಾಯಾವತಿ ಅವರು ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದು, ಅವರು ಒಬ್ಬ ವೇಶ್ಯೆಗಿಂತಲೂ ಕಡೆ ಎಂದು ಟೀಕಿಸಿದ್ದರು. ಇದಕ್ಕೆ ಸ್ವಪಕ್ಷ ಬಿಜೆಪಿ ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ ಬಿಜೆಪಿ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.
ಬಿಎಸ್​ಪಿ ಕಾರ್ಯಕರ್ತರು ದಲಿತ ಮಹಿಳೆಗೆ ಅವಮಾನ ಮಾಡಿದ್ದಾರೆಂದು ಎಫ್​ಐಆರ್ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ದಯಾಶಂಕರ್ ಕುಟುಂಬ ಸದಸ್ಯರು ಮಾಯಾವತಿ ವಿರುದ್ಧ ಕೇಸ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!