ಕುಸಿದುಬಿದ್ದ ಸೇತುವೆ 
ದೇಶ

ಮಹಾ ಸೇತುವೆ ಕುಸಿತ: ಇಂದು ಮತ್ತೆ ಎರಡು ಮೃತದೇಹ ಪತ್ತೆ, ಸಾವಿನ ಸಂಖ್ಯೆ 24ಕ್ಕೆ ಏರಿಕೆ

ಮುಂಬೈ-ಗೋವಾ ಹೆದ್ದಾರಿಯ ಬ್ರಿಟೀಷ್ ಕಾಲದ ಸೇತುವೆ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 24ಕ್ಕೆ ಏರಿಕೆಯಾಗಿದ್ದು, ಶನಿವಾರ ಮತ್ತೆ ಎರಡು...

ರಾಯ್ ಗಡ: ಮುಂಬೈ-ಗೋವಾ ಹೆದ್ದಾರಿಯ ಬ್ರಿಟೀಷ್ ಕಾಲದ ಸೇತುವೆ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 24ಕ್ಕೆ ಏರಿಕೆಯಾಗಿದ್ದು, ಶನಿವಾರ ಮತ್ತೆ ಎರಡು ಮೃತದೇಹ ಪತ್ತೆಯಾಗಿವೆ. ಇದರೊಂದಿಗೆ ಒಟ್ಟು 24 ಮೃತದೇಹಗಳನ್ನು ಹೊರ ತೆಗೆದಂತಾಗಿದೆ.
ಇಂದು ನದಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಇಬ್ಬರು ಪುರುಷರ ಮೃತದೇಹ ಪತ್ತೆಯಾಗಿದ್ದು, ಒಂದು ಮಾರ್ಪಲ್ ಸೇತುವೆ ಬಳಿ ಪತ್ತೆಯಾದರೆ ಮತ್ತೊಂದು ಅಂಬೆರ್ ಕ್ರೀಕ್ ಬಳಿ ಪತ್ತೆಯಾಗಿದೆ ಎಂದು ರಾಯ್ ಗಡ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮಂಗಳವಾರ ತಡರಾತ್ರಿ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಾಡ್‌ ಬಳಿ ಭಾರಿ ಮಳೆ ಮಳೆಯಿಂದಾಗಿ ಮುಂಬೈ-ಗೋವಾ ಹೆದ್ದಾರಿಯ ಬ್ರಿಟೀಷ್ ಕಾಲದ ಸೇತುವೆ ಕುಸಿದುಬಿದ್ದಿತ್ತು. ಈ ವೇಳೆ ಮಹರಾಷ್ಟ್ರ ಸಾರಿಗೆ ಸಂಸ್ಥೆಯ ಎರಡು ಬಸ್, ಒಂದು ತವೆರಾ, ಒಂದು ಹೋಂಡಾ ಸಿಟಿ ಕಾರು ಹಾಗೂ ಆಟೋವೊಂದು ಸಾವಿತ್ರಿ ನದಿಯಲ್ಲಿ ಕೊಚ್ಚಿ ಹೋಗಿದ್ದವು. ಈ ವಾಹನಗಳಲ್ಲಿ ಎಷ್ಟು ಜನರಿದ್ದರು ಎಂಬುದು ಇದುವರೆಗೂ ಖಚಿತ ಮಾಹಿತಿ ಇಲ್ಲ. ಆದರೆ ಕನಿಷ್ಠ 42 ಜನ ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ ಎಂದು ರಾಯಗಡ ಜಿಲ್ಲಾಧಿಕಾರಿ ಸತಿಶ್ ವಾಗಲ್ ಅವರು ಹೇಳಿದ್ದಾರೆ.
ಕೊಚ್ಚಿ ಹೋದವರ ಪತ್ತೆಗಾಗಿ ಕಳೆದ 60 ಗಂಟೆಗಳಿಂದ ಭಾರಿ ಕಾರ್ಯಾಚರಣೆ ನಡೆಯುತ್ತಿದೆ. ಸರ್ಕಾರಿ ಬಸ್ ಗಳ ಶೋಧಕ್ಕಾಗಿ ಮಹಾರಾಷ್ಟ್ರ ಸರ್ಕಾರ ಮತ್ತು ಸ್ಥಳೀಯ  ಅಧಿಕಾರಿಗಳು ಬರೊಬ್ಬರಿ 300 ಕೆಜಿ ತೂಕದ ಬೃಹತ್ ಅಯಸ್ಕಾಂತವನ್ನು ನೀರಿಗಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video