ಲಖನೌ: ಬುಲಂದ್ ಶಹರ್ ತಾಯಿ, ಮಗಳ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸಿಬಿಐಗೆ ವಹಿಸುವ ಬಗ್ಗೆ ಒಂದು ವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಅಲಹಬಾದ್ ಹೈಕೋರ್ಟ್ ಸೋಮವಾರ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಸಿಬಿಐ ತನಿಖೆಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮರೇಶ್ವರ್ ಪ್ರತಾಪ್ ಸಹಿ ಮತ್ತು ನ್ಯಾಯಮೂರ್ತಿ ವಿಜಯ ಲಕ್ಷ್ಮಿ ಅವರನ್ನೊಳಗೊಂಡ ಹೈಕೋರ್ಟ್ ಪೀಠ, ಒಂದು ವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸರ್ಕಾಕ್ಕೆ ಸೂಚಿಸಿ, ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿದೆ.
ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸುತ್ತಿಲ್ಲ. ತನಿಖೆಯಲ್ಲಿ ಹಲವು ಲೋಪಗಳಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ನಿರ್ದೇಶನ ನೀಡಬೇಕು ಎಂದು ಕೋರಿ ಎನ್ ಜಿಒವೊಂದು ಪಿಐಎಲ್ ಸಲ್ಲಿಸಿತ್ತು.
ಜುಲೈ 29ರಂದು ಬುಲಂದ್ ಶಹರ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರ ನೋಯಿಡಾ ಮೂಲದ ಮಹಿಳೆ ಮತ್ತು ಆಕೆಯ ಮಗಳನ್ನು ಕಾರಿನಿಂದ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics