ನವದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.
ವಾಂಗ್ ಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಚಿತ್ರವನ್ನು ವಿದೇಶಾಂಗ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಟ್ವಿಟರ್ ನಲ್ಲಿ ಅಪ್ ಡೇಟ್ ಮಾಡಿದ್ದಾರೆ. ಚೀನಾ ವಿದೇಶಾಂಗ ಸಚಿವರು ಗೋವಾದಲ್ಲಿ ನಡೆಯಲಿರುವ 8 ನೇ ಬ್ರಿಕ್ಸ್ ಸಮ್ಮೇಳನದ ಬಗ್ಗೆ ಗೋವಾ ಸಿಎಂ ಲಕ್ಷ್ಮಿಕಾಂತ್ ಪರ್ಸೆಕರ್ ಅವರೊಂದಿಗೆ ಚರ್ಚಿಸಲು ಭಾರತಕ್ಕೆ ಭೇಟಿ ನೀಡಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೂ ಹಲವು ವಿಷಯಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಭಾರತ ಪ್ರವಾಸ ಕೈಗೊಳ್ಳುವುದಕ್ಕೂ ಮುನ್ನ ಭಾರತದ ಎನ್ಎಸ್ ಜಿ ಸದಸ್ಯತ್ವದ ಬಗ್ಗೆ ಮಾತನಾಡಿದ್ದ ಚೀನಾ ವಿದೇಶಾಂಗ ಸಚಿವರು, ಭಾರತ ಮತ್ತು ಚೀನಾ ಮಿತ್ರರೇ ಹೊರತು ಪ್ರತಿಸ್ಪರ್ಧಿಗಳಲ್ಲ. ಭಾರತಕ್ಕೆ ಎನ್ ಎಸ್ ಜಿ ಅವಕಾಶ ಇದೆ ಎಂದು ಹೇಳಿದೆ.