ಪಾಕ್ ಆಕ್ರಮಿತ ಕಾಶ್ಮೀರ: ಆಗಸ್ಟ್. 12 ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕ್ ಆಕ್ರಮಿತ ಕಾಶ್ಮೀರ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಅವಿಭಾಜ್ಯ ಅಂಗ ಎಂದು ಹೇಳಿ ಬಲೂಚಿಸ್ತಾನ ಹಿಂಸಾಚಾರವನ್ನು ಪ್ರಸ್ತಾಪಿಸಿದ ಬೆನ್ನಲ್ಲೇ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನ್ ಜನತೆ ಪಾಕಿಸ್ತಾನ ಸೇನೆ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಲು ಪ್ರಾರಂಭಿಸಿದ್ದಾರೆ.
ಪ್ರಧಾನಿ ಮೋದಿ ಹೇಳಿಕೆ ಬೆನ್ನಲ್ಲೇ ಆಗಸ್ಟ್ 13 ರಂದು ಬೆಳಿಗ್ಗೆ ಸುಮಾರು 500 ಕ್ಕೂ ಹೆಚ್ಚು ಯುವಕರು ಪಾಕ್ ಸೇನೆ ವಿರುದ್ಧ ಪ್ರತಿಭಟನೆ ನಡೆಸಿದ್ದು, ಆಕ್ರಮಿತ ಕಾಶ್ಮೀರ ಹಾಗೂ ಗಿಲ್ಗಿಟ್ ಬಾಲ್ಟಿಸ್ತಾನ್ ನಿಂದ ತೊಲಗುವಂತೆ ಘೋಷಣೆ ಕೂಗಿದ್ದಾರೆ, ಪರಿಣಾಮ 500 ಯುವಕರನ್ನು ಪಾಕಿಸ್ತಾನ ಸೇನೆ ಬಂಧಿಸಿದೆ.
1948 ರ ಯುದ್ಧಕ್ಕೂ ಮುನ್ನ ಗಿಲ್ಗಿಟ್ ಬಾಲ್ಟಿಸ್ತಾನ್ ಜಮ್ಮು-ಕಾಶ್ಮೀರದ ಭಾಗವಾಗಿತ್ತು. ನಂತರ ದಿನಗಳಲ್ಲಿ ಪಾಕಿಸ್ತಾನ ಅದನ್ನು ತಾನು ಆಕ್ರಮಿಸಿಕೊಂಡಿರುವ ಕಾಶ್ಮೀರದಿಂದ ಪ್ರತ್ಯೇಕಿಸಿ ಪ್ರತ್ಯೇಕ ಆಡಳಿತ ಪ್ರಾಂತ್ಯವನ್ನಾಗಿಸಿದೆ. ಹಿಜ್ಬುಲ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಿನ್ನಲೆಯಲ್ಲಿ ನಡೆದ ಸರ್ವಪಕ್ಷಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಪಾಕ್ ಆಕ್ರಮಿತ ಕಾಶ್ಮೀರ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಅವಿಭಾಜ್ಯ ಅಂಗ ಬಲೂಚಿಸ್ತಾನ ಹಿಂಸಾಚಾರಕ್ಕೆ ಪಾಕ್ ಉತ್ತರ ನೀಡಬೇಕು ಎಂದು ಹೇಳಿದ್ದರು.